ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಗಾಯದ ಮೇಲೆ ಬರೆ

ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಗಾಯದ ಮೇಲೆ ಬರೆ

ಬೆಂಗಳೂರು : ರಸಗೊಬ್ಬರ ಬೆಲೆ ಏರಿಕೆ ಕೇಂದ್ರ ರಾಜ್ಯ ಸರ್ಕಾರಗಳ ಗೋಮುಖ ವ್ಯಾಘ್ರ ನಡವಳಿಕೆ. ಯಾವುದೇ ಕಾರಣಕ್ಕೂ ರಸಗೊಬ್ಬರ ಬೆಲೆ ಏರಿಕೆ ಮಾಡುವುದಿಲ್ಲ ಹಳೆಯ ದರದಲ್ಲಿಯೇ ರಸಗೊಬ್ಬರಗಳು ಮಾರಾಟವಾಗುತ್ತದೆ.

ರೈತರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳುತ್ತಲೇ ಬೆಲೆ ಏರಿಕೆ ಮಾಡಿ ರೈತರನ್ನು ಮೋಸಗೊಳಿಸಿದ್ದಾರೆ. ಹೊಸ ದರ ನಿಗದಿಯಾಗಿದೆ ಡಿಎಪಿ ಪ್ರತಿ ಚೀಲಕ್ಕೆ 1200 ರಿಂದ ಏರಿಕೆ ಮಾಡಿ 1900 ಹೊಸ ದರ ನಿಗದಿ ಮಾಡಿ ರಸಗೊಬ್ಬರ ಕಂಪನಿಗಳು ಆದೇಶ ಹೊರಡಿಸಿವೆ ಎಂದು ರಾಜ್ಯ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕೋವಿಡ್ ಲಾಕ್‌ಡೌನ  ಸಂಕಷ್ಟದಿಂದ ರೈತರು ಬೆಳೆದ ಉತ್ಪನ್ನಗಳ ಬೆಲೆ ಕುಸಿತ ಹಣ್ಣು-ತರಕಾರಿಗಳನ್ನು ಬೀದಿ ಬೀದಿಯಲ್ಲಿ ಸುರಿಯುತ್ತಿದ್ದಾರೆ. ಖರೀದಿದಾರರು ಇಲ್ಲದ ಕಾರಣ ಕೆಲವು ರೈತರು ಕಟಾವು ಮಾಡದೆ ಹೊಲದಲ್ಲಿಯೇ ಬಿಟ್ಟಿದ್ದಾರೆ ಸಾಲ ಮಾಡಿದ ರೈತ ಅಂಗೈಯಲ್ಲಿ ಆಕಾಶ ನೋಡುವಂತಾಗಿದೆ. ಇಂಥ ಸಂದರ್ಭದಲ್ಲಿ ರೈತರಿಗೆ ಬೇಕಾದ ರಸಗೊಬ್ಬರ ಬೆಲೆ ಏರಿಕೆ ಮಾಡಲು ಕೇಂದ್ರ ಸರ್ಕಾರ ರಸಗೊಬ್ಬರ ಸಬ್ಸಿಡಿಯನ್ನು 1 ಲಕ್ಷ 30 ಸಾವಿರ ಕೋಟಿಯಿಂದ 54 ಸಾವಿರ ಕೋಟಿಗೆ ಇಳಿಕೆ ಮಾಡಿದ ಕಾರಣ ಬೆಲೆ ಏರಿಕೆಯಾಗಿದೆ ರೈತ ತಲೆ ಮೇಲೆ ಚಪ್ಪಡಿ ಎಳೆದಿದ್ದಾರೆ.

ಕೂಡಲೇ ಬೆಲೆ ಇಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಸಚಿವರುಗಳು ಸುಳ್ಳು ಸಂದೇಶಗಳನ್ನು ಮಾಧ್ಯಮಗಳ ಮೂಲಕ ಬಿತ್ತುವ ಮೂಲಕ ರೈತರನ್ನ ದಾರಿತಪ್ಪಿಸುತ್ತಿದ್ದಾರೆ. ಇನ್ನಾದರೂ ರೈತರು ಎಚ್ಚೆತ್ತುಕೊಂಡು ರಸಗೊಬ್ಬರ ಖರೀದಿ ನಿಲ್ಲಿಸಿ ತಮ್ಮ ತಮ್ಮ ಮನೆಗಳಿಗೆ ಬೇಕಾದ ಆಹಾರವನ್ನು ಮಾತ್ರ ಬೆಳೆದುಕೊಂಡರೆ ಆಗ ಸರ್ಕಾರವೇ ರೈತರ ಮನೆ ಬಾಗಿಲಿಗೆ ಬರುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ

Related