ಗುಂಡಿನ ದಾಳಿಗೆ ಐವರ ಬಲಿ

ಗುಂಡಿನ ದಾಳಿಗೆ ಐವರ ಬಲಿ

ಕಾಬೂಲ್: ಅಘ್ಘಾನಿಸ್ತಾನದ ಮೇಲೆ ತಾಲಿಬಾನ್ ಉಗ್ರರು ಹಿಡಿತ ಸಾಧಿಸಿದ್ದರಿಂದ ಸಾವಿರಾರು ಮಂದಿ ದೇಶ ತೊರೆಯಲು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದರು. ನೂರಾರು ಮಂದಿ ವಿಮಾನಗಳನ್ನೇರಲು ಧಾವಿಸುತ್ತಿರುವ ಸಂದರ್ಭದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಸೋಮವಾರ ವರದಿಯಾಗಿದೆ.
ಐವರ ಮೃತದೇಹಗಳನ್ನು ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿರುವುದನ್ನು ನೋಡಿ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ನಿಲ್ದಾಣದಲ್ಲಿ ಗುಂಡಿನ ದಾಳಿಯಿಂದಾಗಿ ಐವರು ಮೃತಪಟ್ಟಿದ್ದಾರೆಯೇ ಅಥವಾ ಕಾಲ್ತುಳಿತದಿಂದ ಸಾವು ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಗುಂಪನ್ನು ಚದುರಿಸಲು ಈ ಮೊದಲು ಅಮೆರಿಕದ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದವು ಎಂದು ಮತ್ತೊಬ್ಬರು ಪ್ರತ್ಯಕ್ಷದರ್ಶಿ ತಿಳಿಸಿರುವುದಾಗಿ ‘ರಾಯಿರ‍್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

Related