ಪ್ರವಾಹ : ಸಂಪರ್ಕ ಕಡಿತ

ಪ್ರವಾಹ : ಸಂಪರ್ಕ ಕಡಿತ

ಬಾಗಲಕೋಟೆ : ಮಲಪ್ರಭಾ ನದಿ ಪ್ರವಾಹದ ನೀರು ಸೇತುವೆ ಮೇಲೆ ಹರಿಯುತ್ತಿರುವ ಕಾರಣ ಬಾದಾಮಿ-ರೋಣ-ಗದಗ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರ ರಾತ್ರಿಯಿಂದ ಸ್ಥಗಿತಗೊಂಡಿದೆ.

ಮಲಪ್ರಭೆಯ ಮುನಿಸಿನ ಪರಿಣಾಮ ಬಾಗಲಕೋಟೆ-ಗದಗ ಜಿಲ್ಲೆಗಳು ನಡುವಿನ ಎರಡು ಪ್ರಮುಖ ಸಂಪರ್ಕ ಮಾರ್ಗಗಳು ಬಂದ್ ಆದಂತಾಗಿದೆ.

ಬಾದಾಮಿ ತಾಲ್ಲೂಕಿನ ಗೋವನಕೊಪ್ಪ- ಗದಗ ಜಿಲ್ಲೆ ಕೊಣ್ಣೂರು ಬಳಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಲಪ್ರಭಾ ನದಿ ಸೇತುವೆ ಸಮೀಪ ಹೆದ್ದಾರಿ ಪ್ರವಾಹದ ನೀರಿನಿಂದ ಆವೃತವಾಗಿತ್ತು. ಹೀಗಾಗಿ ಅಲ್ಲಿ ಸಂಚಾರ ಸ್ಥಗಿತಗೊಂಡು ವಾಹನಗಳು ಬಾದಾಮಿ-ರೋಣ ಮಾರ್ಗದಲ್ಲಿ ಸಂಚರಿಸುತ್ತಿದ್ದವು.

ಈಗ ಆ ಮಾರ್ಗದಲ್ಲೂ ಸಂಪರ್ಕ ಕಡಿತಗೊಂಡಿದೆ. ಈಗ ಭಾರಿ ವಾಹನಗಳು ಇಳಕಲ್-ಕುಷ್ಟಗಿ-ಕೊಪ್ಪಳ-ಗದಗ ಮಾರ್ಗವಾಗಿ ಸುತ್ತುಬಳಸಿ ಹುಬ್ಬಳ್ಳಿ ತಲುಪಬೇಕಿದೆ. ಹೀಗಾಗಿ ಮುಂದಿನ 24 ಗಂಟೆಯಲ್ಲಿ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಗೋವನಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳು ಸಾಲುಗಟ್ಟಿ ನಿಂತಿವೆ.

Related