Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ಸಂಭವ
  • National
  • Politics

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ಸಂಭವ

admin January 7, 2025
Spread the love

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಹೇಳಿದರು.

ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಬೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ ಎಂದರು.

ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ. ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿದಂತೆ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆಯಾದ ನೀರನ್ನು ಶುದ್ದೀಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್
Next: ಸಚಿನ್ ಸಾವಲ್ಲಿ ಪ್ರಿಯಾಂಕ್ ಖರ್ಗೆ ಪಾತ್ರವಿಲ್ಲ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.