ಸಿದ್ದರಾಮಯ್ಯಗೆ ಕೊರೋನಾ

ಸಿದ್ದರಾಮಯ್ಯಗೆ ಕೊರೋನಾ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ ಖುದ್ದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿದನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ’ ಎಂದಿದ್ದಾರೆ.

ತಂದೆ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವುದರ ಬಗ್ಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿ, ಅವರ ಕುಟುಂಬ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಂಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಕೊರೋನಾ ಕಾಣಿಸಿಕೊಂಡಿದ್ದು, ನಾನು ಆರೋಗ್ಯವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಸಹ ಟ್ವೀಟ್ ಮಾಡಿದ್ದಾರೆ.

Related