ಕಾಂಗ್ರೆಸ್​ನ ಮಾಜಿ ಶಾಸಕ ನಿಧನ

ಕಾಂಗ್ರೆಸ್​ನ ಮಾಜಿ ಶಾಸಕ ನಿಧನ

ಮೈಸೂರು: ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ನ ಮಾಜಿ ಶಾಸಕರಾಗಿರುವಂತಹ ವಾಸು ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸಲಾಗದೆ ಇಂದು ಅವರು ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಇಂದು (ಮಾ.09) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು.

ಚಾಮರಾಜ ಕ್ಷೇತ್ರದಲ್ಲಿ 4 ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ 3 ಬಾರಿ ಸೋಲು ಕಂಡು, 2013ರ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದರು. ಬಿಜೆಪಿಯ ಶಂಕರಲಿಂಗೇಗೌಡ ವಿರುದ್ಧ2 ಬಾರಿ, ಬಿಜೆಪಿಯ ಎಲ್​. ನಾಗೇಂದ್ರ ವಿರುದ್ಧ ಒಂದು ಬಾರಿ ಸೋಲು ಕಂಡಿದ್ದರು.

 

Related