ಮಾಜಿ ಸಚಿವೆ, ಮನೆ ಕಳ್ಳತನ

ಮಾಜಿ ಸಚಿವೆ, ಮನೆ ಕಳ್ಳತನ

ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾ ನಗರದಲ್ಲಿರುವ ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.

ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್‌ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related