ತುಮಕೂರು: ಗುಬ್ಬಿ ಹಾಗೂ ಶಿರಾ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ₹50 ಕೋಟಿ ವೆಚ್ಚದ “ಮಠದ ಹಳ್ಳ” ಏತ ನೀರಾವರಿ ಯೋಜನೆಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು (ಗುರುವಾರ ಜೂಮ್ 26) ಶಂಕುಸ್ಥಾಪನೆ ನೆರವೇರಿಸಿದರು. ಇದನ್ನು ಓದಿ: ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಲು ಕಾರಣವೇನು?
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕ ಗುಬ್ಬಿ ಶ್ರೀನಿವಾಸ್, ಡಿಸಿಎಂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್, ವಿಶ್ವೇಶ್ವರಯ್ಯ ಜಲ ನಿಗಮದ ಎಂ.ಡಿ. ಸಣ್ಣಚಿತ್ತಯ್ಯ ಮತ್ತಿತರರು ಇದ್ದರು.
