ನವಜಾತ ಶಿಶುಗಳ ಮಾರಾಟ ನಾಲ್ವರ ಬಂಧನ

ನವಜಾತ ಶಿಶುಗಳ ಮಾರಾಟ ನಾಲ್ವರ ಬಂಧನ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಸುಗುಸುಗಳ ಕಳ್ಳತನ ಹೆಚ್ಚಾಗುತ್ತಿದ್ದು, ಇದರಿಂದ ಬೇಸತ್ತಿದ್ದ ಹೆತ್ತವರು ಸಂಕಷ್ಟ ಪಡುವಂತಹ ಪರಿಸ್ಥಿತಿ ಬಂದಿದೆ. ಇನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಸುಗುಸುಗಳ ಕಳ್ಳತನ ಮಾಡುತ್ತಿರುವ ದಂದೆಕೊರರ ವಿರುದ್ಧ ಸಿಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಹೌದು, ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ನವಜಾತ ಶಿಶು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಶುಕ್ರವಾರ ಮಗು ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಸಂಘಟಿತ ಅಪರಾಧ ವಿಭಾಗದ ಅಧಿಕಾರಿಗಳು ಕಣ್ಣನ್ ರಾಮಸ್ವಾಮಿ, ಹೇಮಲತಾ, ಮುರುಗೇಶ್ವರಿ ಹಾಗೂ ಶರಣ್ಯ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ರಾಜರಾಜೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಮಹಿಳೆಯೊಬ್ಬರಿಗೆ ಮಗುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಗ್ಯಾಂಗ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದೆ.

 

Related