ಆಫ್ಘಾನಿಸ್ತಾನದಿಂದ ಬಂದವರಿಗೆ ಉಚಿತ ಲಸಿಕೆ

ಆಫ್ಘಾನಿಸ್ತಾನದಿಂದ ಬಂದವರಿಗೆ ಉಚಿತ ಲಸಿಕೆ

ನವದೆಹಲಿ: ವೈಲ್ಡ್ ಪೋಲಿಯೋ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಅಫ್ಘಾನಿಸ್ತಾನದಿಂದ ಹಿಂದಿರುಗಿದವರಿಗೆ ಉಚಿತ ಪೋಲಿಯೋ ಲಸಿಕೆ ಹಾಕಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು ಉಚಿತ ಪೋಲಿಯೋ ಲಸಿಕೆ – ಒಪಿವಿ ಮತ್ತು ಎಫ್‌ಐಪಿವಿ ಲಸಿಕೆ ಹಾಕಲು ನಿರ್ಧರಿಸಿದ್ದೇವೆ. ಸಾರ್ವಜನಿಕ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಅವರ ಪ್ರಯತ್ನಗಳಿಗಾಗಿ ಆರೋಗ್ಯ ತಂಡಕ್ಕೆ  ಅಭಿನಂದನೆಗಳು.ತಾಲಿಬಾನ್‌ನಿಂದ ಬರುವ ಅಫ್ಘಾನ್ ನಿರಾಶ್ರಿತರಿಗೆ ಯುನೈಟೆಡ್ ಕಿಂಗ್‌ಡಮ್ ಲಸಿಕೆಗಳನ್ನು ನೀಡುವುದಾಗಿ ಹೇಳಿದ್ದಾರೆ.

Related