ಪ್ರತಿದಿನ 5 ಲಕ್ಷ ಜನರಿಗೆ ಲಸಿಕೆ- ಸಿಎಂ

ಪ್ರತಿದಿನ 5 ಲಕ್ಷ ಜನರಿಗೆ ಲಸಿಕೆ- ಸಿಎಂ

ಬೆಂಗಳೂರು: ಗಿವ್ ಇಂಡಿಯಾ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಆಯೋಜನೆಯಾಗಿರುವ ವ್ಯಾಕ್ಸಿನೇಟ್ ಕಾರ್ಯಕ್ರಮಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಂಗಳವಾರ ಚಾಲನೆ ನೀಡಿದರು.

ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ರಾಷ್ಟ್ರಪತಿ ಕೋವಿಡ್ ನಿಯಂತ್ರಣ ದೃಷ್ಟಿಯಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕೈ ತೊಳೆಯುತ್ತಿರಿ, ಸಾಮಾಜಿಕ ಅಂತರವನ್ನು ಪಾಲಿಸಿ, ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿ ಕೊಳ್ಳಿ, ಇದಕ್ಕೆ ಪರ್ಯಾಯ ಯಾವುದೂ ಇಲ್ಲ ಎಂದ ಅವರು ಸಾಂಪ್ರದಾಯಕ ಭಾರತೀಯ ಆಹಾರ ಸೇವಿಸಿ ಜಂಕ್ ಫುಡ್ ಸೇವಿಸಬೇಡಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಬಡವರು, ಕೆಳ ಹಂತದ ವರ್ಗದವರಿಗೆ ಲಸಿಕೆ ನೀಡುವುದು ನಮ್ಮ ಗುರಿ. ದಾನಿಗಳು, ಖಾಸಗಿ ಸಂಸ್ಥೆಗಳು ಸಿ ಎಸ್ ಆರ್ ನಿಧಿ ಮೂಲಕ ಲಸಿಕೆ ನೀಡಲು ಮುಂದಾಗಬೇಕು ಸರ್ಕಾರ ಸಮಾಜ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಿದೆ ಎಂದರು. ಪ್ರಸ್ತುತ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಸೆಪ್ಟೆಂಬರ್ ವೇಳೆಗೆ ಪ್ರತಿದಿನ 5 ಲಕ್ಷ ಜನರಿಗೆ ಲಸಿಕೆ ನೀಡುವ ಉದ್ದೇಶವಿದೆ. ಕೇಂದ್ರ ಸರ್ಕಾರದಿಂದ 1.5 ಕೋಟಿ ಲಸಿಕೆ ಪೂರೈಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಡಾ. ಕೆ. ಸುಧಾಕರ, ಮುನಿರತ್ನ, ಸಂಸದ ಪಿ.ಸಿ ಮೋಹನ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

Related