Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೈರತಿ ಬಸವರಾಜ್​ಗೆ ಶುರುವಾಯಿತು ಮತ್ತಷ್ಟು ಸಂಕಷ್ಟ
  • Bangalore
  • Crime
  • Politics
  • State

ಬೈರತಿ ಬಸವರಾಜ್​ಗೆ ಶುರುವಾಯಿತು ಮತ್ತಷ್ಟು ಸಂಕಷ್ಟ

admin July 19, 2025 1 minute read
Spread the love

ಬೆಂಗಳೂರು: ನಗರದಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಹತ್ಯ ನಡೆದಿದ್ದು ಇದರಲ್ಲಿ ಪ್ರತಿಷ್ಠಿತ ರಾಜಕಾರಣಿಯಾದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಬೈರತಿ ಬಸವರಾಜ್ ಅವರ ಕೈವಾಡವಿದೆ ಎಂದು ಬಿಕ್ಲುಶಿವ ಅವರ ತಾಯಿ ದೂರು ದಾಖಲಿಸಿದ್ದರು. ತಾಯಿ ದೂರಿನ ಆದರದ ಮೇಲೆ ಬೈರತಿ ಬಸವರಾಜ್ ಅವರ ವಿರುದ್ಧ fir ಕೂಡ ದಾಖಲಾಗಿತ್ತು.

ಇನ್ನು ಬಂಧನ ಭೀತಿಯನ್ನು ಎದುರಿಸುತ್ತಿರುವ ಬೈರತಿ ಬಸವರಾಜ್ ಅವರು ಹೈಕೋರ್ಟ್ ಗೆ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಬೈರತಿ ಬಸವರಾಜ್ ಅವರು ಸಲ್ಲಿಸಿರುವ ಅರ್ಜಿಯನ್ನು ರದ್ದುಗೊಳಿಸಿ ವಿಚಾರಣೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರಿಂದ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತಷ್ಟು ಬಂಧನದ ಭೀತಿ ಶುರುವಾಗಿದೆ.

ಹೌದು, ಬೈರತಿ ಬಸವರಾಜ್ ಅವರು ಎಫ್​ಐಆರ್​ ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದ ಬಿಜೆಪಿ ಶಾಸಕನಿಗೆ ಹಿನ್ನಡೆಯಾಗಿದ್ದು, ಪೊಲೀಸರ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಇದರಿಂದ ಮಾಜಿ ಸಚಿವ ಬೈರತಿ ಬಸವರಾಜ್​ ಅಡಕತ್ತರಿಗೆ ಸಿಲುಕಿದ್ದು, ಬಂಧನ ಭೀತಿಯಲ್ಲಿದ್ದಾರೆ. ಇದನ್ನೂ ಓದಿ: ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ: ಸಿಎಂ

ರೌಡಿಶೀಟರ್​ ಶಿವಪ್ರಕಾಶ್​ ಪ್ರಕರಣದಲ್ಲಿ ದಾಖಲಾಗಿರುವ ಎಫ್​ಐಆರ್​ ಮತ್ತು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್​ ರದ್ದು ಕೋರಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್​, ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್​ ಅವರಿದ್ದ ಪೀಠ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಅಲ್ಲದೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಹೈಕೋರ್ಟ್​ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ‌. ಅರ್ಜಿದಾರರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್​ 35(3)ರ ಅಡಿಯಲ್ಲಿ ನೋಟಿಸ್​ ಜಾರಿ ಮಾಡಲಾಗಿದೆ. ಅದರಂತೆ ವಿಚಾರಣೆ ನಡೆಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೂ ಇಂದು ಬೆಳಗ್ಗೆ 11.30ಕ್ಕೆ ಪೊಲೀಸರ ವಿಚಾರಣೆಗೆ ಹಾಜರಾಗಲು ನಿರ್ದೇಶನವನ್ನು ನೀಡಿದೆ. ಹೀಗಾಗಿ ತನಿಖಾಧಿಕಾರಿ ಕೆಜಿಹಳ್ಳಿ ಎಸಿಪಿ ಪ್ರಕಾಶ್ ರಾಥೋಡ್ ಮುಂದೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಅನುಶ್ರೀ ಮದುವೆಯಾಗುತ್ತಿರುವುದು ಲವ್ ಮ್ಯಾರೇಜಾ ಅಥವಾ ಅರೆಂಜ್ ಮ್ಯಾರೇಜ್?
Next: ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.