ದಲಿತ ಯುವತಿ ಮೇಲೆ ಅತ್ಯಾಚಾರ

ದಲಿತ ಯುವತಿ ಮೇಲೆ ಅತ್ಯಾಚಾರ

ಲಖನೌ: ಉತ್ತರ ಪ್ರದೇಶದ ಹತ್ರಾಸ್‍ನಿಂದ 500 ಕಿ.ಮೀ ದೂರದಲ್ಲಿರುವ ಬಲರಾಮ್‍ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ ಯುವತಿ ಮೇಲೆ ಕಾಮುಕರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಆಕೆ ಲಖನೌನ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಕಾಲೇಜಿಗೆ ಪ್ರವೇಶಾತಿ ಪಡೆಯಲು ಬೆಳಗ್ಗೆ ಹೋಗಿದ್ದ ಯುವತಿಯನ್ನು ಅಪಹರಣ ಮಾಡಲಾಗಿತ್ತು. ಆಕೆ ಮನೆಗೆ ವಾಪಸ್ಸಾಗದಿದ್ದಾಗ ಕುಟುಂಬದವರು ಶೋಧ ಕಾರ್ಯ ನಡೆಸುತ್ತಿದ್ದಾಗ ಸಂಜೆ 7 ಗಂಟೆ ಸುಮಾರಿಗೆ ಹಲ್ಲೆಕೋರರು ಇ- ರಿಕ್ಷಾದಲ್ಲಿ ಆಕೆಯನ್ನು ಮನೆಗೆ ಕಳುಹಿಸಿದ್ದರು. ಆಕೆಯ ಕಾಲು, ಬೆನ್ನಿನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಟೋ ರಿಕ್ಷಾ ಚಾಲಕ ಮನೆಗೆ ಮುಂಭಾಗ ಆಕೆಯನ್ನು ಎಸೆದು ಹೋಗಿದ್ದ.ಆಕೆಗೆ ಎದ್ದು ನಿಲ್ಲುವ ಅಥವಾ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಅತ್ಯಾಚಾರಕ್ಕೊಳಗಾದ ಯುವತಿಯ ತಾಯಿ ಕಣ್ಣೀರು ಹಾಕಿದ್ದಾರೆ.

ನಂತರ ಸ್ಥಳೀಯ ಆಸ್ಪತ್ರೆಗೆ ಆಕೆಯನ್ನು ಕೊಂಡೊಯ್ಯಲಾಯಿತು. ಆದರೆ, ಆಕೆಯ ಸ್ಥಿತಿ ಗಂಭೀರವಾಗಿದ್ದು, ಲಖನೌ ಆಸ್ಪತ್ರೆಗೆ ಕೊಂಡೊಯ್ಯುವಂತೆ ಡಾಕ್ಟರ್ ನೀಡಿದರು. ಆದರೆ, ಬಲರಾಮಪುರದಲ್ಲಿಯೇ ಆಕೆ ಸಾವನ್ನಪ್ಪಿದ್ದಾಗಿ ತಾಯಿ ತಿಳಿಸಿದರು. ಮೃತದೇಹವನ್ನು ಪೆÇಲೀಸರು ಕುಟುಂಬಕ್ಕೆ ಹಸ್ತಾಂತರಿಸಿದ ಬಳಿಕ ಬುಧವಾರ ಅಂತ್ಯಕ್ರಿಯೆ ನಡೆಸಲಾಗಿದೆ.

Related