ಕಾರಿನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್!

ಕಾರಿನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್!

ಶಿವಮೊಗ್ಗ : ಬಾಲಕಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ತನ್ನ ತಾಯಿ ಜೊತೆಗಿದ್ದ ಬಾಲಕಿಗೆ ಊಟ ಕೊಡಿಸುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ವಾರ್ಡ್ ಬಾಯ್ ಮತ್ತು ಆತನ ಮೂವರು ಸ್ನೇಹಿತರು ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ.

ಘಟನೆ ಬಳಿಕ ಆಸ್ಪತ್ರೆಗೆ ಬಂದ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಮನೋಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಾದ ಪ್ರಜ್ವಲ್, ವಿನಯ್ ಮತ್ತು ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Related