ಭಾರಿ ಏರಿಕೆ ಕಂಡ ಬೆಳ್ಳುಳ್ಳಿ

  • In State
  • January 31, 2024
  • 79 Views
ಭಾರಿ ಏರಿಕೆ ಕಂಡ ಬೆಳ್ಳುಳ್ಳಿ

ದಾವಣಗೆರೆ: ಇತ್ತೀಚಿನ ಕೆಲವು ದಿನಗಳಿಂದ ರಾಜ್ಯದಲ್ಲಿ ವಿಪರೀತವಾಗಿ ಬೆಳ್ಳುಳ್ಳಿಯ ಬೆಲೆ ಏರಿಕೆ ಆಗುತ್ತಿರುವುದರಿಂದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಹೌದು, ಕರ್ನಾಟಕ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಬೆಳ್ಳುಳ್ಳಿ ಮಾರಾಟವಾಗುತ್ತಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ದುಬಾರಿಯಾಗಿರುವ ಬೆಳ್ಳುಳ್ಳಿಯನ್ನು ಕೊಳ್ಳಲು ಹಿಂದೆಟು ಗ್ರಾಹಕರು ಹಾಕುತ್ತಿದ್ದಾರೆ.

ಇನ್ನು ಸತತವಾಗಿ ಬೆಳ್ಳುಳ್ಳಿ ದರದಿಂದ ಏರಿಕೆಯಾಗಿದ್ದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುತಿದ್ದು, ಪ್ರತಿ ಕ್ವಿಂಟಲ್ ಗೆ 32 ರಿಂದ 33 ಸಾವಿರಕ್ಕೆ ಮಾರಾಟವಾಗುತ್ತಿರುವುದರಿಂದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಗ್ರಾಹಕರು ಮಾತ್ರ ಬೆಳ್ಳುಳ್ಳಿ ಬೆಲೆ ಏರಿಕೆಯಿಂದ ಹೈರಾಣ ಆಗಿದ್ದಾರೆ.

ಈ ಹಿಂದೆ ಕೆಜಿಗೆ 280-300 ರೂ.ಗೆ ಸಿಗುತ್ತಿದ್ದ ಬೆಳ್ಳುಳ್ಳಿ ಈ ವಾರ ಮತ್ತೆ ಏರಿಕೆ ಕಂಡಿದೆ. ಹೋಲ್ ಸೇಲ್​ನಲ್ಲಿ ಪ್ರತಿ ಕ್ವಿಂಟಾಲ್​ಗೆ 32 ರಿಂದ 33 ಸಾವಿರ ದರ ನಿಗದಿಯಾಗಿದೆ. ಸದ್ಯ ಜನ 400-500ರೂಗೆ ಕೆಜಿ ಬೆಳ್ಳುಳ್ಳಿ ಖರೀದಿ ಮಾಡುತ್ತಿದ್ದಾರೆ.

ದಾವಣಗೆರೆ ಎಪಿಎಂಸಿ‌ ‌ಹರಾಜಿನಲ್ಲಿ ಅತ್ಯಂತ ಹೆಚ್ಚು ದರಕ್ಕೆ ಬೆಳ್ಳುಳ್ಳಿ ಸೇಲ್ ಆಗಿದೆ. ಬೆಳ್ಳುಳ್ಳಿ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಹೆಚ್ಚಿನ ಪ್ರಮಾಣದಲ್ಲಿ ಬೆಳ್ಳುಳ್ಳಿ ಇರದೇ ಇರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಮಾರುಕಟ್ಟೆಗೆ ನಿರೀಕ್ಷಿತ ಮಟ್ಟದಲ್ಲಿ ಬೆಳ್ಳುಳ್ಳಿ ಸಪ್ಲೈ ಆಗುತ್ತಿಲ್ಲ. ಹೀಗಾಗಿ ಬೆಳ್ಳುಳ್ಳಿ ದರ ಏರಿಕೆಯಾಗಿದೆ. ಇದರಿಂದ ರೈತರು ಫುಲ್ ಖುಷ್ ಆಗಿದ್ದು ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

 

Related