ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ

ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ

ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಟೈಗರ್ ವುಡ್ಸ್ ಅವರನ್ನು ಆಸ್ವತ್ರೆಗೆ ದಾಖಲಿಸಲಾಗಿದೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಕಾರು ಬ್ಲ್ಯಾಕ್‌ಹಾರ್ಸ್ ರಸ್ತೆಯಲ್ಲಿರುವ ಹಾಥಾರ್ನ್ ಬೌಲೆವಾರ್ಡ್ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 7.12ರ ಸುಮಾರಿಗೆ ವುಡ್ಸ್ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಈ ವೇಳೆ ಕಾರಿನಲ್ಲಿದ್ದ ಟೈಗರ್ ವುಡ್ಸ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ ಟೈಗರ್ ವುಡ್ಸ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವುಡ್ಸ್ ಅವರ ಕಾರು ಸಂಪೂರ್ಣ ಹಾನಿಯಾಗಿದೆ ಎಂದು ಲಾಸ್ ಏಂಜಲಿಸ್‌ನ ಕೌಂಟಿ ಶೆರಿಫ್ಸ್ ಇಲಾಖೆ ಮಾಹಿತಿ ನೀಡಿದೆ.

Related