ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

ಮೈಸೂರು: ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆ ಜಾರಿಯಲ್ಲಿದ್ದು, ವಾರದಲ್ಲಿ ಮೂರು ಬಾರಿ ಹಾಲು ಕೊಡಲಾಗುತ್ತದೆ. ಇನ್ನು ಈ ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆಯುವ ವಯಸ್ಸಿನಲ್ಲಿ ಮಕ್ಕಳಿಗೆ ಆಹಾರದ ಕೊರತೆ ಇಲ್ಲದೆ ಮಾನಸಿಕ ಮತ್ತು ದೈಹಿಕವಾಗಿ ಕುಗ್ಗಬಾರದು ಎಂದು ರಾಜ್ಯ ಸರ್ಕಾರ, ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕತೆಯನ್ನು ಒದಗಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಹಾಲಿಗೆ ಮಾಲ್ಟ್ ಹಾಕಿಕೊಡಲಾಗುವುದು ಎಂದು ಹೇಳಿದರು.

ಇನ್ನು ಈಗಾಗಲೇ ಇದರ ಬಗ್ಗೆ ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ. ಶೀರ್ಘದಲ್ಲಿಯೇ ಈ ಯೋಜನೆ ಜಾರಿಗೆ ಬರಲಿದೆ. ಈ ಹಿಂದೆ ವಾರದಲ್ಲಿ ಒಂದು ಮೊಟ್ಟೆ ಕೊಡುತ್ತಿದ್ದರು, ಆದರೆ ನಾವು ಎರಡು ಮೊಟ್ಟೆ ಕೊಡುತ್ತಿದ್ದೇವೆ. ಮಕ್ಕಳ ಪೌಷ್ಠಿಕಾಂಶ ಜಾಸ್ತಿ ಮಾಡಲು ಪ್ರಯತ್ನ ಮಾಡಿದ್ದೇವೆ ಎಂದರು.

 

Related