ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಿಹಿಸುದ್ದಿ!

ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಿಹಿಸುದ್ದಿ!

ಬೆಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಕೆ.ಎಸ್.ಆರ್.ಟಿ.ಸಿ ನಿಗಮವು ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ.

ಹೌದು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೇವೆಯನ್ನು ಒದಗಿಸಲು ಮುಂದಾಗಿದ್ದು, ರಾಜ್ಯದಲ್ಲಿ ಡಿಸೆಂಬರ್ 22 ರಿಂದ ಡಿಸೆಂಬರ್ 24 ರವರೆಗೆ ಬೆಂಗಳೂರು ನಗರದಿಂದ ವಿವಿಧ ಬಸ್ ನಿಲ್ದಾಣಗಳಿಗೆ ಹೆಚ್ಚುವರಿ ಬಸ್ ಸೇವೆ ವ್ಯವಸ್ಥೆಯನ್ನು ಒದಗಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಶೃಂಗೇರಿ, ಹೊರನಾಡು, ದಾವಣಗೆರೆ, ಗೋಕರ್ಣ, ಶಿರಸಿ, ರಾಯಚೂರು ಹಾಗೂ ತಿರುಪತಿಗೆ ತೆರಳಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೆಚ್ಚುವರಿ ಬಸ್ ಹೊರಡಲಿವೆ.

ಇನ್ನು, ಕ್ರಿಸ್ಮಸ್​ ಹಬ್ಬ ಆಚರಣೆ ಮತ್ತು ಹೊಸ ವರ್ಷದ ಸಂಭ್ರಕ್ಕೆ ಇನ್ನು, ಕೆಲವೇ ದಿನಗಳು ಬಾಕಿ ಇದೆ. ಈ ನಡುವೆ ಹಬ್ಬಕ್ಕೆ ಊರಿಗೆ ಹೊರಡುವವರ ಸಂಖ್ಯೆಯೂ ಹೆಚ್ಚಾಗಿಯೇ ಇರುವ ಕಾರಣ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಹೆಚ್ಚುವರಿ ಬಸ್​ ವ್ಯವಸ್ಥೆಯನ್ನು ಕಲ್ಪಿಸಿದೆ.

Related