ಬೆಂಗಳೂರು: ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಹಿ ಸುದಿಯನ್ನು ನೀಡಿದೆ. ಪರಿಶಿಷ್ಟ ಜಾತಿ ಸಮುದಾಯವನ್ನು ಎಡಗೈ, ಬಲ ಮತ್ತು ಇತರೆ ಎಂಬ 3 ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಕ್ರಮವಾಗಿ 6%, 6% ಮತ್ತು 5% ಒಳಮೀಸಲಾತಿ ನೀಡಲು ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಶೇಷ ಸಂಪುಟ ಸಭೆಯಲ್ಲಿ ಒಳಮಿಸಲು 6-6-5 ನೀಡಲು ಸಚಿವ ಸಂಪುಟ ತೀರ್ಮಾನ ಕೈಗೊಂಡ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮುದಾಯದವರು ಅಭಿನಂದಿಸಿದ್ದಾರೆ. ಇದನ್ನೂ ಓದಿ: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ
ಇನ್ನು ನ್ಯಾಯಮೂರ್ತಿ ನಾಗಮೋಹನ್ದಾಸ್ ಆಯೋಗದ ವರದಿಯಂತೆ ಎಸ್ ಸಿ ಸಮುದಾಯವನ್ನು 5 ಗುಂಪುಗಳಾಗಿ ವರ್ಗೀಕರಣ ಮಾಡಿತ್ತು. ಗುಂಪು 1 ಅತೀ ಹಿಂದುಳಿದ ಜಾತಿಗಳು ಶೇ.1, ಗುಂಪು 2 ಎಡಗೈ ಜಾತಿಗಳು ಶೇ 6, ಗುಂಪು 3 ಬಲಗೈ ಜಾತಿಗಳು ಶೇ.5, ಗುಂಪು 4 ಬಂಜಾರ, ಬೋವಿ, ಕೊರಚ, ಕೊರಮ (ಅಸ್ಪೃಶ್ಯರಲ್ಲದ ಜಾತಿಗಳು) ಶೇ.4, ಗುಂಪು 5 ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿ ಶೇ.1 ಎಂದು ವರ್ಗೀಕರಣ ಮಾಡಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಡ, ಬಲ ಹಾಗೂ ಇತರೆ ಎಂದು ಮೂರು ವಿಂಗಡನೆ ಮಾಡಿ ಮರುವರ್ಗೀಕರಿಸಿ ಒಳಮೀಸಲಾತಿ ಮರುಹಂಚಿಕೆಗೆ ತೀರ್ಮಾನಿಸಲಾಗಿದೆ.
