ರೈತರಿಗೆ ಸೌಲಭ್ಯ ಒದಗಿಸಲು ಸರ್ಕಾರ ವಿಫಲ

ರೈತರಿಗೆ ಸೌಲಭ್ಯ ಒದಗಿಸಲು ಸರ್ಕಾರ ವಿಫಲ

ಗಂಗಾವತಿ : ಸಮರ್ಪಕವಾಗಿ ಯೂರಿಯಾ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಪೂರೈಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಮನಿಯರ್ ಮತ್ತು ಯೂತ್ ಕಾಂಗ್ರೆಸ್ ಮುಖಂಡರಾದ ವಿಶ್ವನಾಥ್ ಮಾಲಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಸ್ವಾಮ್ಯದ ಟಿಎಪಿಸಿಎಂಎಸ್‌ನಲ್ಲಿ ಮಣ್ಣು ಮಿಶ್ರಿತ ರಸಗೊಬ್ಬರ ಪೂರೈಕೆಯಾಗಿದ್ದು, ರೈತರು ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಬೇಕಾದ ಜಿಲ್ಲಾ ಉಸ್ತುವಾರಿ ಮತ್ತು ಕೃಷಿ ಸಚಿವರಾದ ಬಿ.ಸಿ. ಪಾಟೀಲರು ಯಾವ ಕ್ರಮ ಕೈಗೊಂಡಿಲ್ಲ. ಹೆಸರಿಗೆ ಮಾತ್ರ ರೈತರ ಪರ ಸರ್ಕಾರ, ಮತ್ತು ರೈತರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದಂತ ಮುಖ್ಯಮಂತ್ರಿಗಳು ರೈತರ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ನೆರೆ ಹಾವಳಿಗೀಡಾದ ಪ್ರದೇಶಗಳ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಮತ್ತು ಸಮರ್ಪಕ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮೇಲಿನ ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಸಬ್ಸಿಡಿ ಮುಂದುವರಿಸಬೇಕು ಮತ್ತು ಪೆಟ್ರೋಲ್, ಡೀಸೆಲ್ ದರವನ್ನು ಕಡಿಮೆ ಮಾಡಬೇಕು. ಗ್ರಾಹಕರ ಮೇಲಿನ ಹೊರೆಯನ್ನು ತಗ್ಗಿಸಬೇಕೆಂದು ಈ ಮೂಲಕ ಕೇಂದ್ರ ಸರ್ಕಾರಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ಮನಿಯರ್ ಮತ್ತು ಯೂತ್ ಕಾಂಗ್ರೆಸ್ ಮುಖಂಡರಾದ ವಿಶ್ವನಾಥ್ ಮಾಲಿಪಾಟೀಲ್ ನುಡಿದರು.

Related