ವಿದ್ಯುತ್ ಉತ್ಪಾದನೆ ನಮ್ಮ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿದೆ: ಡಿಸಿಎಂ

ವಿದ್ಯುತ್ ಉತ್ಪಾದನೆ ನಮ್ಮ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿದೆ: ಡಿಸಿಎಂ

ಬೆಳಗಾವಿ: ರಾಜ್ಯದಲ್ಲಿ ಮಳೆಗಾಲದ ಸಂದರ್ಭದಲ್ಲಿ ಸರಿಯಾಗಿ ಮಳೆಯಾಗದೆ ಹೋದರೆ ಸರಕಾರಕ್ಕೆ ಸುಮಾರು ಒಂದು ಸಾವಿರ ಕೋಟಿ ನಷ್ಟವಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಮಳೆಗಾಲದಲ್ಲಿ ಒಂದು ದಿನ ಮಳೆ ಆಗದಿದ್ದರೇ ಸರ್ಕಾರಕ್ಕೆ ಒಂದು ಸಾವಿರ ಕೋಟಿ ರೂ. ನಷ್ಟವಾಗುತ್ತದೆ. ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಮುತುವರ್ಜಿ ವಹಿಸಿದೆ. ಮೊದಲು ರೈತರಿಗೆ 6 ಗಂಟೆ ವಿದ್ಯುತ್ ವಿತರಣೆ ‌ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಮ್ಮ ಸರ್ಕಾರ ಏಳು ಗಂಟೆ ವಿದ್ಯುತ್ ‌ನೀಡಲು ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ನಮ್ಮ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿದೆ. ನೀರಿಲ್ಲದೆ ರೈತರಿಗೆ ಕಷ್ಟವಾಗುತ್ತಿದೆ. ರೈತರು ನೀರು ಬಳಕೆ‌ ಬಗ್ಗೆ ಜಾಗೃತಿ ವಹಿಸಬೇಕು. ನೀರು ಕಳ್ಳತನ ‌ಆಗುತ್ತಿರುವುದಕ್ಕೆ ಸರ್ಕಾರಕ್ಕೆ ದೊಡ್ಡ ಭಾರ ಆಗುತ್ತಿದೆ. ನೀರು ಬಳಕೆದಾರರ‌ ಸಂಘಗಳನ್ನು ‌ಕ್ರಿಯಾಶೀಲ ಮಾಡುವ ಪ್ರಯತ್ನ ‌ನಡೆದಿದೆ. ನೀರು ಸಂರಕ್ಷಣೆಗೆ ಕಾನೂನು ‌ತರಲು ನಮ್ಮ ಸರ್ಕಾರ ತೀರ್ಮಾನ ‌ಮಾಡಿದೆ. ಬೆಳಗಾವಿ ಭಾಗದ ಕೆರೆ, ನದಿ ತುಂಬಿವೆ ಮಲಪ್ರಭಾ ಡ್ಯಾಂ ಮಾತ್ರ ಅರ್ಧ ಇದೆ. ಮೈಸೂರು ಭಾಗದ ಜನರಿಗೆ ದೇವರೇ ಕಾಪಾಡಬೇಕು ಎಂದರು.

 

Related