ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರ್.ಜಿ .ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.
ಗ್ಯಾರಂಟಿ ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದೇ ಕೇವಲ ಕುರ್ಚಿ ಉಳಿಸಿಕೊಳ್ಳಲು ಮಾತ್ರ ಬಡಿದಾಡುತ್ತಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ. ನಾಡಿನ ಸಮಗ್ರ ಅಭಿವೃದ್ಧಿಗಾಗಿ ಹಾಗೂ ನೊಂದ ಜೀವಗಳಿಗೆ ದನಿಯಾಗಲು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ಸಂಕಲ್ಪ ಮಾಡುವಂತೆ ವಿನಂತಿಸಿದರು. ಇದನ್ನೂ ಓದಿ: ಜು.19 ರಂದು ʼಕೈʼ ಸರ್ಕಾರದ ಬೃಹತ್ ಕಾರ್ಯಕ್ರಮ
ಈ ಸಂದರ್ಭದಲ್ಲಿ ಕೋಲಾರ ಸಂಸದರಾದ ಶ್ರೀ ಮಲ್ಲೇಶ್ ಬಾಬು ರವರು, ಹಿರಿಯರು, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ತಿಪ್ಪೇಸ್ವಾಮಿ ರವರು, ವಿಧಾನಪರಿಷತ್ ಸದಸ್ಯರಾದ ಶ್ರೀ ಗೋವಿಂದ್ ರಾಜಣ್ಣ ರವರು, ಶ್ರೀ ಜವರಾಯ್ ಗೌಡ, ಮಾಜಿ ಶಾಸಕರಾದ ಶ್ರೀ, ಡಾ. ಕೆ. ಅನ್ನದಾನಿ ರವರು , ಶ್ರೀ ಸುರೇಶ್ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
