Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ಸರ್ಕಾರ ಸಿದ್ಧ..!
  • Bangalore
  • Politics
  • State

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ಸರ್ಕಾರ ಸಿದ್ಧ..!

admin July 9, 2025 1 minute read
Spread the love

ಬೆಂಗಳೂರು: ಪತ್ರಿಕೆಯ ಮೂಲಕ ಸಮಾಜಕ್ಕೆ ಮತ್ತು ಓದುಗರಿಗೆ ಏನನ್ನು ಕೊಡಬೇಕು ಎನ್ನುವುದನ್ನು ಅರಿತು ಪಿ.ಲಂಕೇಶ್ ಅವರು ವಾರಪತ್ರಿಕೆಯ ಓದುಗರನ್ನು ಸೃಷ್ಟಿ ಮಾಡಿಕೊಂಡಿದ್ದರು. ಆ ನಿಟ್ಟಿನಲ್ಲಿ ಅವರು ಪತ್ರಿಕೋದ್ಯಮಕ್ಕೆ ಹೊಸ ಧಿಕ್ಕನ್ನು ತೋರಿಸಿಕೊಟ್ಟರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ಮಂಗಳವಾರ (ಜುಲೈ 08) ನಗರದ ಪ್ರೆಸ್‌ಕ್ಲಬ್‌ನಲ್ಲಿ ‘ಕೆಂಧೂಳಿ ಪತ್ರಿಕಾ ಬಳಗ’ದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ವಾರಪತ್ರಿಕೆ ಅಂದು-ಇಂದು, ಲಂಕೇಶ್ ಕಂಡ ವಾರಪತ್ರಿಕೆ ಮತ್ತು ಸೈದ್ಧಾಂತಿಕ ನಿಲುವುಗಳು’ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾನತಾಡಿದ ಅವರು, ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದರು.

ಇಂದಿನ ಯುವ ಪತ್ರಕರ್ತರೆಲ್ಲರೂ ಲಂಕೇಶರ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಪತ್ರಿಕೆಗಳಿಗೆ ಇಂದು ಓದುಗರೇ ಇಲ್ಲವೇನೋ ಎನ್ನುವ ಅನುಮಾನ ಶುರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ: ಕೆ.ಹೆಚ್ ಮುನಿಯಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಲಂಕೇಶ್‌ರನ್ನು ಆಗಾಗ ನೆನಪು ಮಾಡಿಕೊಳ್ಳುತ್ತಿರುತ್ತಾರೆ. ಲಂಕೇಶರ ಗರಡಿಯಲ್ಲಿ ಸಾಹಿತಿಗಳು, ಚಿಂತಕರು ರಾಜಕಾರಣಿಗಳು ಸೇರಿದಂತೆ ಹಲವರು ಬೆಳೆದಿದ್ದಾರೆ. ಅವರ ಕೊನೆಯ ದಿನಗಳಲ್ಲಿಯೂ ಅವರು ಓದುತ್ತಿದ್ದರು. ಓದುವುದನ್ನು ಎಂದಿಗೂ ನಿಲ್ಲಿಸಿರಲಿಲ್ಲ. ಕನ್ನಡ ಪತ್ರಿಕೋದ್ಯಮಕ್ಕೆ ಪ್ರಸಿದ್ಧಿ, ಘನೆತೆಯನ್ನು ತಂದುಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಆರ್.ಜಿ.ಹಳ್ಳಿನಾಗರಾಜ್, ಪಿ.ಕುಸುಮಾ ಆಯರಹಳ್ಳಿ, ಶಿವಾನಂದ ತಗಡೂರು, ತುರುವನೂರು ಮಂಜುನಾಥ, ಪರಶಿವ ಧನಗೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ: ಕೆ.ಹೆಚ್ ಮುನಿಯಪ್ಪ
Next: ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ: ಡಿಕೆಶಿ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.