ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು ಕೋಟಾ ಶ್ರೀನಿವಾಸ

ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು ಕೋಟಾ ಶ್ರೀನಿವಾಸ

ಬೆಳಗಾವಿ: ಮೈಸೂರು ವಿಶ್ವವಿಖ್ಯಾತ ದಸರಾದಲ್ಲಿ ತಾಯಿ ಚಾಮುಂಡೇಶ್ವರಿ ತಾಯಿಯ ಅಂಬಾರಿಯನ್ನು ಸುಮಾರು ವರ್ಷಗಳು ಹೊತ್ತು ಜನಸಾಗರದಲ್ಲೂ ಗತ್ತಿನಿಂದ ಹೆಜ್ಜೆ ಹಾಕುತ್ತಿದ್ದ ಅರ್ಜುನ ಮೃತಪಟ್ಟಿದೆ.

ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ.

ಇನ್ನು ಅರ್ಜುನ ಮೃತ ಪಟ್ಟಿರುವ ರ ಬಗ್ಗೆ ಪ್ರತಿಕ್ರಿಯೆ ನೀಡಿದ ಕೋಟ ಶ್ರೀನಿವಾಸ್ ಪೂಜಾರಿಯವರು, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.

ಪರಿಷತ್‌ ಕಲಾಪದ ವೇಳೆ ಮಾತನಾಡಿದ ಅವರು, 60 ವರ್ಷ ಮೀರಿದ ಅನೆಯನ್ನ ಕಾರ್ಯಾಚರಣೆಗೆ ಬಳಕೆ ಮಾಡಬಾರದು ಅಂತ ನಿಯಮ ಇತ್ತು. ಈಗ ಅರ್ಜುನ ಆನೆಗೆ 64 ವರ್ಷ. ಕಾಡಾನೆ ಸೆರೆ ಹಿಡಿಯಲು ಯಾಕೆ ಉಪಯೋಗ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ.

ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು.

ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.

Related