ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ

ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ

ಬೆಂಗಳೂರು: ಹೇಗಾದರೂ ಮಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಬೇಕೆಂಬ ಹಟದಿಂದ ರಾಜ ಬಿಜೆಪಿ ನಾಯಕರು ಒಂದಲ್ಲ ಒಂದು  ಕಸರತ್ತು ನಡೆಸುತ್ತಾ ಇದ್ದಾರೆ.

ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯಿಂದ ಆಯೋಜಿಸಲಾಗಿರುವ ಗ್ರಾಮ ಚಲೋ ಅಭಿಯಾನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಚಾಲನೆ ನೀಡಿದರು. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಹೋಬಳಿಯ ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.

ಈ ವೇಳೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್‌. ಹರೀಶ್, ಪಕ್ಷಕ್ಷೆ ಮರು ಸೇರ್ಪಡೆಯಾಗಿರುವ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡ ಮಾರೇಗೌಡ ಭಾಗಿಯಾದರು.

 

Related