Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಸಿರು ಮತ್ತು ಸ್ವಚ್ಚತೆ ನಮ್ಮ ಸರ್ಕಾರದ ಧ್ಯೇಯ: ಡಿಕೆಶಿ
  • Bangalore
  • Front news
  • Politics
  • State

ಹಸಿರು ಮತ್ತು ಸ್ವಚ್ಚತೆ ನಮ್ಮ ಸರ್ಕಾರದ ಧ್ಯೇಯ: ಡಿಕೆಶಿ

admin June 17, 2025 1 minute read
Spread the love

ಬೆಂಗಳೂರು: ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು (ಮಂಗಳವಾರ ಜೂ. 17) ರಂದು ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಎದುರು ಚಾಲನೆ ನೀಡಿ  ಮಾತನಾಡಿದ ಅವರು, ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಈ ಜಾಗೃತಿ ಕ್ಲಬ್ ಗಳನ್ನು ರಚನೆ ಮಾಡಬೇಕು. ಪ್ರಕೃತಿ ಉಳಿಸುವ ದೊಡ್ಡ ಹೋರಾಟದ ಹಾಗೂ ಜಾಗೃತಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂದು ಈ ಆದೇಶ ಮಾಡಲಾಗಿದೆ. ಒಂದೊಂದು ಶಾಲೆ ಮರ ಬೆಳೆಸಲು ಆಯಾಯ ಪ್ರದೇಶಗಳನ್ನು ದತ್ತು ಪಡೆಯಬೇಕು ಎಂದು ತಿಳಿಸಿದರು.

ಹಸಿರು ಮತ್ತು ಸ್ವಚ್ಚತೆ ಇದೇ ನಮ್ಮ ಸರ್ಕಾರದ ಧ್ಯೇಯ. ಇದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವುದು ಸರ್ಕಾರದ ಕರ್ತವ್ಯ. ಕರ್ನಾಟಕದ‌ ದೊಡ್ಡ ಆಸ್ತಿಯೇ ನಮ್ಮ ಪ್ರಕೃತಿ. ಪ್ಲಾಸ್ಟಿಕ್ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ, ಜವಾಬ್ದಾರಿಯಾಗಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ತಿಳಿಸಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಪ್ರಕ್ರಿಯೆಯಲ್ಲಿ ಇದ್ದಾರೆ.‌ 2 ದಿನದ ಹಿಂದೆ ದೆಹಲಿ,‌ ಅಹಮದಾಬಾದ್‌ ನಲ್ಲಿ‌ ಇದ್ದೆ ಅಲ್ಲಿನ ಉಷ್ಣಾಂಶ ಹತ್ತಿರತ್ತಿರ ‌49 ಡಿಗ್ರಿಯಿತ್ತು.‌ ಬೆಂಗಳೂರಲ್ಲಿ 22- 23 ಇದೆ. ಈ ವಾತಾವರಣ ನಮ್ಮ ಕರ್ನಾಟಕದ,‌ ಬೆಂಗಳೂರಿನ ಆಸ್ತಿ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು: ಡಿಸಿಎಂ ಡಿಕೆಶಿ

ಮನುಷ್ಯ ಹಾಗೂ ಅವನ ಜೀವನ ಪದ್ಧತಿ ಪ್ರಕೃತಿಯ ಜೊತೆ ಬೆಸೆದುಕೊಂಡಿದೆ. ನಾವೆಲ್ಲರೂ ಪರಿಸರದ ಒಂದು ಭಾಗವಷ್ಟೇ. ಶುದ್ದ ಗಾಳಿ, ನೀರು, ಪರಿಸರ ನಿರ್ಮಾಣ ನಮ್ಮೆಲ್ಲರ ಅತಿದೊಡ್ಡ ಜವಾಬ್ದಾರಿ. ಪರಿಸರ ಉಳಿಸುವ ಅರಿವು ಯುವ ಜನಾಂಗಕ್ಕೆ ಬರಬೇಕು. ಪರಿಸರ ನಮ್ಮ‌ ಮನೆ ಅದನ್ನು ನಾಶ‌ ಮಾಡದೇ ಇರುವಂತೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಯವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು: ಡಿಸಿಎಂ ಡಿಕೆಶಿ
Next: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.