ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಲಂಚ ಪಡೆದ ಸಿಬ್ಬಂದಿ ಅರೆಸ್ಟ್!

ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಲಂಚ ಪಡೆದ ಸಿಬ್ಬಂದಿ ಅರೆಸ್ಟ್!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಗು ಮುನ್ನ 5 ಗ್ಯಾರಂಟಿ ಘೋಷಿಸಿತ್ತು. ಈಗಾಗಲೇ ಐದು ಗ್ಯಾರಂಟಿಗಳಲ್ಲಿ ಕೆಲವೊಂದು ಜಾರಿ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಅಜ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ಹಣ ಪಡೆಯಬಾರದೆಂದು ಈಗಾಗಲೇ ಸರ್ಕಾರ ಕಟ್ಟುನಿಟ್ಟಿನ ನಿಯಮವನ್ನು ಜಾರಿ ಮಾಡಿದ್ದರು ಸಹ ಕೆಲವೊಂದು ಬೆಂಗಳೂರು ಒನ್ ಕೇಂದ್ರಗಳಲ್ಲಿ ಪ್ರತಿ ಅರ್ಜಿಗೆ 100 ರಿಂದ 200 ಹಣವನ್ನು ಪಡೆಯುತ್ತಿದ್ದಾರೆ

ಹೌದು, ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಹಣ ಪಡೆಯಬಾರದು, ಉಚಿತವಾಗಿ ಮಾಡಿಕೊಡಬೇಕು ಎಂದು ಸರ್ಕಾರ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ.

ಆದರೂ ಇದೀಗ ಕೆಲವು ‘ಬೆಂಗಳೂರು ಒನ್ ಕೇಂದ್ರಗಳಲ್ಲಿ ಲಂಚ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ಜೆಪಿ ನಗರದ ಅರಕೆರೆಯಲ್ಲಿ ಪ್ರತಿ ಅರ್ಜಿಗೆ 150-200 ರೂ. ವಸೂಲಿ ಮಾಡುತ್ತಿದ್ದಾರೆ. ಸ್ವೀಕೃತಿ ಪತ್ರಕ್ಕೆ ಕೇವಲ 20 ರೂಪಾಯಿ ಕೊಡಬೇಕು. ಆದರೆ, ಆದರೆ ಅರ್ಜಿ ಸಲ್ಲಿಕೆಗೆ 200 ರೂ. ವಸೂಲಿ ಮಾಡುತ್ತಿರುವುದರಿಂದ ಗ್ರಾಹಕರು ಲಂಚ ಪಡೆಯುತ್ತಿರುವ ಬಗ್ಗೆ ದೂರು ನೀಡಿದ್ದಾರೆ.

 

Related