ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೋನಾ

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೋನಾ

ಮುಂಬೈ : ಮಹಾರಾಷ್ಟ್ರದಲ್ಲಿ ಕೊರೋನಾ ಹಾವಳಿ ಮತ್ತೆ ಹೆಚ್ಚಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಅಲ್ಲಿನ ಸರ್ಕಾರ ಅಮರಾವತಿ ಮತ್ತು ಯಾವತ್ಮಲ್ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಿದೆ.

ಜಿಲ್ಲೆಗಳಲ್ಲಿ ಪ್ರತಿದಿನ ಏಳು ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಕಂಡ ಬರುತ್ತಿವೆ. ಹೀಗಾಗಿ ಜನರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೇ ಮತ್ತೆ ಲಾಕ್‌ಡೌನ್ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಎ ಮತ್ತು ಬಿ ಶ್ರೇಣಿಯ ಅಧಿಕಾರಿಗಳಿಗೆ ಹಾಜರಾತಿ ಕಡ್ಡಾಯ ಇರುತ್ತದೆ. ಸಿ ಮತ್ತು ಡಿ ವೃಂದದ ಸಿಬ್ಬಂದಿಯಲ್ಲಿ ಶೇ 25 ರಷ್ಟು ಮಾತ್ರ ಬೆಳಿಗ್ಗೆ 9 ರಿಂದ ಸಂಜೆ ರವರೆಗೆ ಹಾಗೂ ಇನ್ನುಳಿದ ಶೇ 25 ರಷ್ಟು ಕಚೇರಿ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಅವಕಾಶ ಇರುತ್ತದೆ. ಕರೊನಾ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಮಂಗಳವಾರ 6218 ಹೊಸ ಸೋಂಕು ಪತ್ತೆ ಪ್ರಕರಣಗಳು ವರದಿಯಾಗಿವೆ. 61 ಜನ ಮೃತಪಟ್ಟಿದ್ದಾರೆ. ಇದುವರೆಗೆ ಆ ರಾಜ್ಯದಲ್ಲಿ 21,12,312 ಜನರಿಗೆ ಸೋಂಕು ತಗುಲಿತ್ತು. ಇದರಲ್ಲಿ 53409 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

Related