ಗ್ರಾ.ಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಗ್ರಾ.ಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಚಿಕ್ಕಮಗಳೂರು : ಗ್ರಾ.ಪಂ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾ.ಪಂ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆನ್‌ಲೈನ್ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ಸೂಚಿಸಿದ್ದಾರೆ.

ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್ ಜ್ಹೋನ್, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಹಾಗಾಗಿ, ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.

ಡಿ. ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದ್ದು, 113 ತಾಲ್ಲೂಕುಗಳಲ್ಲಿನ ಗ್ರಾ.ಪಂ ಮೊದಲ ಹಂತದ ಚುನಾವಣೆ ಡಿ. 22ರಂದು ಹಾಗೂ ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾ.ಪಂ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಡಿ.7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

Related