ಹನುಮ ಧ್ವಜ: ಮಂಡ್ಯದಲ್ಲಿ ತೀವ್ರಗೊಂಡ ಘರ್ಷಣೆ

 ಹನುಮ ಧ್ವಜ: ಮಂಡ್ಯದಲ್ಲಿ ತೀವ್ರಗೊಂಡ ಘರ್ಷಣೆ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡ ಗ್ರಾಮದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ತ್ರಿವರ್ಣ ಧ್ವಜವನ್ನು ಹಾರಿಸಲು ಪಂಚಾಯಿತಿ ಅನುಮತಿ ಪಡೆದಿತ್ತು ಆದರೆ ಸಾಯಂಕಾಲದ ಹೊತ್ತಿಗೆ ತ್ರಿವರ್ಣ ಧ್ವಜವನ್ನು ತೆಗೆದು ಹನುಮಾನ್ ಇರುವ ಧ್ವಜವನ್ನು ಹಾರಿಸುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ.

ಇನ್ನು ಈ ಸಂಬಂಧ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲೆಂದು ಪೊಲೀಸ ಅಧಿಕಾರಿಗಳು ಲಾಠಿಚಾರ್ಜ್ ಮಾಡಿದ್ದಾರೆ.

ಹೌದು, ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇಂದು ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹನುಮ ಧ್ವಜ ತೆಗೆಸುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿದಿದ್ದು, ಗಲಾಟೆ ಆರಂಭವಾಗಿದೆ.

ಸದ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ, ಈ ಘಟನೆಯು ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷವಾದ ಬಿಜೆಪಿ-ಜೆಡಿಎಸ್ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿಯಿಂದ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರವಾಗಿದೆ.

 

Related