ಬೆಂಗಳೂರು: “ಹರ್ ಘರ್ ತಿರಂಗ” ಅಭಿಯಾನದ ಸಂಬಂಧ ಇಂದು (ಸೋಮವಾರ ಆ.4) ರಂದು ಬೆಳಿಗ್ಗೆ 11.00 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ” ರಾಜ್ಯ ಮಟ್ಟದ ಪೂರ್ವಭಾವಿ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಬಿ.ವೈ. ವಿಜಯೇಂದ್ರ, ಕೇರಳ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷರು ಮತ್ತು ದಕ್ಷಿಣ ಭಾರತದ ‘ಹರ್ ಘರ್ ತಿರಂಗ’ ಅಭಿಯಾನದ ಪ್ರಮುಖರಾದ ಶ್ರೀ ಕೆ. ಸುರೇಂದ್ರನ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಹೆಚ್.ಸಿ. ತಮ್ಮೇಶ್ ಗೌಡ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಕು. ಸಿ. ಮಂಜುಳಾ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ಶಾಸಕರಾದ ಶ್ರೀ ಧೀರಜ್ ಮುನಿರಾಜು, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ. ಮಲ್ಲಿಕಾರ್ಜುಜನ ಬಾಳಿಕಾಯಿ ಅವರು ಭಾಗವಹಿಸಲಿದ್ದಾರೆ.
