ಎಚ್ ಡಿ ರೇವಣ್ಣಗೆ ಬಂಧನದ ಭೀತಿ

ಎಚ್ ಡಿ ರೇವಣ್ಣಗೆ ಬಂಧನದ ಭೀತಿ

ಕಲಬುರಗಿ: ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ಎಸ್ಐಟಿ ಅಧಿಕಾರಿಗಳು ಚುರುಕಿನ ಕಾರ್ಯಚರಣೆ ನಡೆಸುತ್ತಿದ್ದಾರೆ.

ಇನ್ನು ಪ್ರಜ್ವಲ್ ಅವರ ತಂದೆಯಾದ ಎಚ್ ಡಿ ರೇವಣ್ಣ ಅವರಿಗೆ ವಿಚಾರಣೆಗೆ ಇಂದು ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಒಂದು ವೇಳೆ ಹೆಚ್ ಡಿ ರೇವಣ್ಣ ಅವರು ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ಎಚ್ಚರಿಕೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಅವರು ನೀಡಿದ್ದಾರೆ.

ಈ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ A1 ಆರೋಪಿಯಾಗಿದ್ದಾರೆ. ಹಾಗಾಗಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ 2 ದಿನ ಸಮಯ ಕೇಳೋ ಸಾಧ್ಯತೆ ಇದೆ.

ಪ್ರಜ್ವಲ್​​ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತಗೆದುಕೊಂಡಿದೆ, ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡೋದೇ ಇಲ್ಲ. ಈಗಾಗಲೇ ಪ್ರಜ್ವಲ್​​ ರೇವಣ್ಣಗೆ ಲುಕ್​ಔಟ್ ನೋಟಿಸ್​ ನೀಡಲಾಗಿದೆ, ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಇಂಥಾ ಪ್ರಕರಣಗಳಲ್ಲಿ ಕಾಲಾವಕಾಶ ಕೊಡಲು ಆಗೋದಿಲ್ಲ, ಹೀಗಾಗಿ ಅರೆಸ್ಟ್ ಮಾಡಲು SIT ಎಲ್ಲಾ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇವತ್ತು ಹಾಜರಾಗದೇ‌ ಇದ್ರೆ ರೇವಣ್ಣ ಅವರನ್ನು ಬಂಧಿಸಲೇಬೇಕಾಗುತ್ತೆ, ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ.

 

Related