ಹೆಚ್‌ಡಿಕೆ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

ಹೆಚ್‌ಡಿಕೆ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

ರಾಮನಗರ: ಯುಗಾದಿ ಹಬ್ಬದ ಪ್ರಯುಕ್ತ ಇಂದು ಹೊಸತೊಡಕು ಆಚರಣೆಯಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿ ಮತ್ತು ಮಂಡ್ಯ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿ ಇರುವ ಕೇತಗಾನಹಳ್ಳಿ ಗ್ರಾಮದಲ್ಲಿ ಬಾಡೂಟ ವ್ಯವಸ್ಥೆ ಮಾಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆರೋಪಿಸಿತ್ತು.

ಇನ್ನು ಇದನ್ನು ತಿಳಿದ ರಾಮನಗರ ಚುನಾವಣಾ ಆಯೋಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಹೆಚ್‌ಡಿಕೆ ಅವರ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ಚುನಾವಣಾ ಅಧಿಕಾರಿಗಳಿ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಎಂದು ಪ್ರಶ್ನಿಸಿತ್ತು.

ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ? ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಪೋಸ್ಟ್ ಮಾಡಿತ್ತು.

ಆರೋಪ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಬಿಡದಿಯ ಕೇತಗಾನಹಳ್ಳಿ ತೋಟದ ಮನೆ ಮಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಊಟದ ವ್ಯವಸ್ಥೆ, ಖುರ್ಚಿ, ಪೆಂಡಾಲ್ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಚುನಾವಣಾ ಅಧಿಕಾರಿ ರಮೇಶ್ ಅವರು ಮಾತನಾಡಿ, 50ಕ್ಕೂ ಮಂದಿ ಸೇರಿದರೆ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆಗುತ್ತದೆ. ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಮಾಡಬಹುದು. ಆದರೆ ರಾಜಕೀಯ ನಾಯಕರು, ಮುಖಂಡರು ಬರುವ ಹಾಗಿಲ್ಲ. ಒಂದು ವೇಳೆ ರಾಜಕೀಯ ಮುಖಂಡರು ಬಂದರೆ ಎಲ್ಲವನ್ನೂ ಸೀಜ್ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಸದ್ಯ ಒಳಗೆ ಯಾವುದೇ ರಾಜಕೀಯ ಮುಖಂಡರು, ನಾಯಕರು ಇಲ್ಲ. ಒಂದು ಟೀಂ ಇಲ್ಲೇ ಇದ್ದು ಎಲ್ಲವನ್ನೂ ಪರಿಶೀಲನೆ ನಡೆಸಲಿದೆ. ನೀತಿ ಸಂಹಿತೆ ಉಲ್ಲಂಘನೆಯಾದರೆ ಕಾನೂನು ರೀತಿಯ ಕ್ರಮವಹಿಸುತ್ತೇವೆ. ಈಗಾಗಲೇ ಖುರ್ಚಿಗಳನ್ನು ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

Related