ಎಚ್‌ಡಿಕೆ ಆರೋಗ್ಯದಲ್ಲಿ ಚೇತರಿಕೆ

ಎಚ್‌ಡಿಕೆ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ಕೆಲವು ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನೆನ್ನೆ ಆಗಸ್ಟ್ 30ರಂದು ಬೆಂಗಳೂರಿನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ಗುರುವಾರ ಆಗಸ್ಟ್ 31ರಂದು ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಅವರನ್ನು ಐಸಿಯುನಿಂದ ನಾರ್ಮಲ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನೂ 3 ದಿನಗಳ ಕಾಲ ವಾರ್ಡ್​​ನಲ್ಲೇ ಚಿಕಿತ್ಸೆ ಮುಂದುವರೆಯಲಿದ್ದು, ಯಾರನ್ನೂ ಭೇಟಿ ಮಾಡದಂತೆವೈದರು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.

 

Related