HDK ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ

HDK ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇತ್ತೀಚಿಗೆ ದಳಪತಿ ಮತ್ತು ಕಾಂಗ್ರೆಸ್ಸಿಗರ ನಡುವೆ ವಾಕ್ ಸಮರ ಜೋರಾಗಿ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇತ್ತೀಚಿನ ದಿನಗಳಲ್ಲಿ ಮಾತಿನ ಮುಖಾಂತರ ಕಾಂಗ್ರೆಸಿಗರನ್ನು ಕಾಲು ಎಳೆಯುತ್ತಿದ್ದಾರೆ.

ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಶ್ವಾಶತವಾಗಿ ತಿಹಾರ್ ಜೈಲಿಗೆ ಹೋಗ್ತಾರೆ. ಮುಂದಿನ ವರ್ಷ ಮತ್ತೆ ವಿಧಾನಸಭಾ ಚುನಾವಣೆ ನೆಡಯಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕುಮಾರಸ್ವಾಮಿ ಜಡ್ಜ್ ಎಂದೇ ಕಾಂಗ್ರೆಸ್ ನಾಯಕರು ಹೆಚ್ಡಿಕೆಗೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು, ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೆಂಕಿಯುಗಳಿದ್ದಾರೆ. ನಿನ್ನೆ ನಡೆದ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ರಾಜಕೀಯ ಭವಿಷ್ಯದ ಜತೆಗೆ ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ದಳಪತಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿದೆ.

ರಾಮನಗರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಮುಂದಿನ ವರ್ಷ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ. ಆಗ ಕನಕಪುರ ಕ್ಷೇತ್ರವನ್ನ ಜೆಡಿಎಸ್ ಗೆಲ್ಲಲಿದೆ. ಹೀಗಿರುವ ಹಾಲಿ ಶಾಸಕರು ತಿಹಾರ್ ಜೈಲಿಗೆ ಶಾಶ್ವತವಾಗಿ ಹೋಗಬಹುದು. ಚುನಾವಣೆಗೆ ನಿಲ್ಲೋದಕ್ಕೆ ಸಾಧ್ಯ ಆಗದೇ ಇರಬಹುದು ಎಂದಿದ್ದಾರೆ. ಮೈತ್ರಿ ಸರ್ಕಾರ ಬಿದ್ದಿದ್ದೆ ಇವರು ಹಾಗೂ ರಮೇಶ್ ಜಾರಕಿಹೊಳಿ ತಿಕ್ಕಾಟದಿಂದ ಎಂದು ಕನಕಪುರ ಬಂಡೆ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಕ್ ಪ್ರಹಾರ ನಡಸಿದ್ದಾರೆ.

 

Related