ಬೈಕ್ ತೋಳಿಯುವವನಿಗೆ ಬಿತ್ತು ಭರ್ಜರಿ ದಂಡ

ಬೈಕ್ ತೋಳಿಯುವವನಿಗೆ ಬಿತ್ತು ಭರ್ಜರಿ ದಂಡ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು-ಮೂರು ತಿಂಗಳಿಗಳಿಂದ ಕುಡಿಯುವ ನೀರಿನ ಅಭಾವ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ವಾಸಿಸುತ್ತಿರುವ ಜನತೆಗೆ ಕಾವೇರಿ ಕುಡಿಯುವ ನೀರನ್ನು ಅನ್ಯ ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ.

ಆದರೆ ಇಲ್ಲೊಬ್ಬ ಭೂಪ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಬೈಕನ್ನು ಸ್ವಚ್ಛಗೊಳಿಸಿದ್ದಾನೆ. ಇದನ್ನರಿತ ಬಿ ಡಬ್ಲ್ಯೂ ಎಸ್ ಎಸ್ ಬಿ ಸಿಬ್ಬಂದಿಗಳು ಇವರಿಗೆ ಭಾರಿ ದಂಡವನ್ನು ಹೇರಿದ್ದಾರೆ.

ಹೌದು, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬೈಕ್ ಅನ್ನು ಪೈಪ್ ಹಿಡಿದು ನೀರನ್ನು ದುಂದು ವೆಚ್ಚ ಮಾಡುತ್ತಿದ್ದ ವ್ಯಕ್ತಿಗೆ ಭರ್ಜರಿ ದಂಡ ಬಿದ್ದಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಿಬ್ಬಂದಿ 5,000 ರೂ. ದಂಡ ವಿಧಿಸಿದ್ದಾರೆ.

ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಪ್ರಮಾಣ ಕುಸಿತವಾಗಿರುವುದರಿಂದ ಬೆಂಗಳೂರಿಗೆ ಕುಡಿಯುವ ಉದ್ದೇಶಕ್ಕೆ ಮತ್ತು ಗೃಹಬಳಕೆಗೆ ಮಾತ್ರ ಕಾವೇರಿ ನೀರನ್ನು ಪೂರೈಸಲಾಗುತ್ತಿದೆ. ಜೊತೆಗೆ, ಕಾವೇರಿ ನದಿಯಿಂದ ಪೂರೈಸುವ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದವರಿಗೆ 5,000 ರೂ. ದಂಡ ವಿಧಿಸಲಾಗುತ್ತಿದೆ.

ಆದರೆ, ಯುಗಾದಿ ಹಬ್ಬದ ದಿನ ಗೃಹಬಳಕೆ ಹಾಗೂ ಕುಡಿಯುವ ಉದ್ದೇಶಕ್ಕೆ ಪೂರೈಸಲಾದ ನೀರನ್ನ ಅನ್ಯ ಬಳಕೆಗೆ ಬಳಕೆ ಮಾಡಿದವರಿಗೆ ಜಲಮಂಡಳಿ ಸಿಬ್ಬಂದಿ ದಂಡ ಹಾಕಿದ್ದಾರೆ. ಜಲಮಂಡಳಿಯ ಆದೇಶವನ್ನು ಉಲ್ಲಂಘನೆ ಮಾಡಿದ ಪ್ರತಿಯೊಬ್ಬರಿಗೂ ತಲಾ 5 ಸಾವಿರ ರೂ. ದಂಡ ಹಾಕಲಾಗಿದೆ.

Related