ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಂದು ಬಿರುಗಾಳಿ ಸಮೇತ ಭಾರಿ ಮಳೆಯಾಗಿದ್ದು ಇದರಿಂದ ವಾಹನ ಸಮರರು, ಪಾದ ಚಾರಿಗಳು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು (ಗುರುವಾರ ಮೇ. 01) ರಂದು ಸಂಜೆ ಸುಮಾರು 4:30ಕ್ಕೆ ಸುರಿದ ಮಳೆಯಿಂದಾಗಿ ನಗರದಲ್ಲಿ ಅಲ್ಲಲ್ಲಿ ಗಿಡಮರಗಳು ದೊರೆಗುರುಳಿ ಅವಾಂತರಗಳೇ ಸೃಷ್ಟಿಯಾಗಿವೆ.
ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ವರುಣನ ಅಬ್ಬರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
