36 ಗಂಟೆಗಳಲ್ಲಿ ವಿವಿಧೆಡೆ ಭಾರೀ ಮಳೆ

36 ಗಂಟೆಗಳಲ್ಲಿ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ನಿವಾರ್ ಚಂಡಮಾರುತದ ನಡುವೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೆರಡು ಚಂಡಮಾರುತಗಳು ರೂಪುಗೊಂಡಿದ್ದು, ಮುಂದಿನ 36 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಪುದುಚೇರಿ, ಕಾರೈಕಲ್, ಕೇರಳ, ಆಂಧ್ರಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿಯೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಡಿ.1 ರಿಂದ ೪ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related