ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಹುಬ್ಬಳ್ಳಿ, ಧಾರವಾಡ ಅವಳಿ ನಗರದಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ನಗರಗಳೆಲ್ಲ ಹಳ್ಳಗಳಂತಾಗಿದ್ದು ಸರ್ವಜನಿಕರು ಪರಿದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೆ ಮಳೆಯಿಂದಾಗಿ ಹುಬ್ಬಳ್ಳಿ, ಧಾರವಾಡ ಅವಳಿ ನಗರದಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗೋಕಾಕ್ನಲ್ಲಿ ಒಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಪ್ರಗತಿ ಪಥದ ಮುಂದಣ ಹೆಜ್ಜೆ ಕಿರು ಹೊತ್ತಿಗೆ ಬಿಡುಗಡೆ
ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ನದಿಗಳು ಉಕ್ಕಿ ಹರಿದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಬೆಣ್ಣೆಹಳ್ಳ ತುಂಬಿ ಹರಿದ ಪರಿಣಾಮ ಹಲವು ಗ್ರಾಮಗಳಿಗೆ ನೀರು ನುಗ್ಗಿ ಜನ ಮನೆಯಿಂದ ನೀರನ್ನು ಹೊರಹಾಕುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಕಾರವಾರ, ಗದಗ ನಗರಗಳಲ್ಲೂ ಭಾರೀ ಮಳೆ ಬಿದ್ದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಕುಸಿತವಾಗಿವೆ. ನೂರಾರು ಎಕರೆಯಲ್ಲಿದ್ದ ಬೆಳೆ ನಾಶವಾಗಿದೆ.
