Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಲು ಕಾರಣವೇನು?
  • Bangalore
  • Politics
  • State

ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಲು ಕಾರಣವೇನು?

admin June 26, 2025 1 minute read
Spread the love

ಬೆಂಗಳೂರು: ತುಮಕೂರು ಸುತ್ತಮುತ್ತಲು ಹೇಮಾವತಿ ಲಿಂಕ್ ಕೆನಾಲ್ ಮಾಡಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಣತೊಟ್ಟಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ಮಾಡಬಾರದು ಎಂದು ತುಮಕೂರು ಸುತ್ತಮುತ್ತಲಿನ ರೈತರು ಹೊರಟ ಮಾಡಿದ್ದರು. ರೈತರ ಜೊತೆ ಸ್ಥಳೀಯ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರು ಕೂಡ ಸಾತ್ ನೀಡಿದ್ದರು.

ಅಷ್ಟಾದರೂ ಕೂಡ ಯೋಜನೆಯನ್ನು ಕೈಬಿಡದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಮುಂದುವರಿಸುತ್ತಿದ್ದಾರೆ. ಇನ್ನು ಜೂನ್ 30ಕ್ಕೆ ಹೇಮಾವತಿ ಲಿಂಕ್ ಕೆನಾಲ್ ಸಭೆ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ಈಗ ಆ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ

ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದ ಸಚಿವರು

ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ ಎಂದರು.

ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದ ಸಚಿವರು
Next: ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.