ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ..!

ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ..!

ಬೆಂಗಳೂರು: ರಾಜ್ಯದಲ್ಲಿರುವಂತಹ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಇಷ್ಟು ದಿನಗಳ ಕಾಲ ಕುವೆಂಪು ಅವರ ರಚನೆ ಮಾಡಿರುವ ನಾಡಗೀತೆಯನ್ನು ಕಡ್ಡಾಯವಾಗಿ ಹೇಳುತ್ತಿದ್ದರು. ಆದರೆ ಈಗ ರಾಜ್ಯ ಸರ್ಕಾರ ಕುವೆಂಪು ಅವರ ರಚಿಸಿರುವ ನಾಡಗೀತೆಯನ್ನು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಿಲ್ಲವೆಂದು ಆದೇಶ ಹೊರಡಿಸಿದೆ.

ಈ ಹಿಂದೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ಕಡ್ಡಾಯವಾಗಿ ಹೇಳಲಾಗುತ್ತಿತ್ತು. ಆದರೆ ಈಗ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವು ಖಾಸಗಿ ಶಾಲೆಗಳಲ್ಲಿ ಕುವೆಂಪು ಅವರ ರಚನೆ ಮಾಡಿರುವ ನಾಡಗೀತೆ ಕಡ್ಡಾಯವಿಲ್ಲವೆಂದು ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದ ಈ ಆದೇಶ ಹೊರಡಿಸಲಾಗಿದೆ. ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಾಗಿರಲಿದೆ ಎಂದು ಈ ಆದೇಶದಲ್ಲಿ ತಿಳಿಸಲಾಗಿದೆ. ಆ ಮೂಲಕ ರಾಜ್ಯ ಸರ್ಕಾರ ತನ್ನ ದಿನಕ್ಕೊಂದು ವಿವಾದದ ಅಡಿಯಲ್ಲಿ ಮತ್ತೊಂದು ಹೊಸ ವಿವಾದ ಸೃಷ್ಟಿಸಿದೆ. ಖಾಸಗಿ ಶಾಲೆಗಳಿಗೆ ಸರ್ಕಾರ ವಿನಾಯಿತಿ ನೀಡಿದ್ದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಖಾಸಗಿ ಶಾಲೆಗಳಳಲ್ಲಿ ನಾಡಗೀತೆಗೆ ವಿನಾಯಿತಿ ನೀಡಿರುವ ಸರ್ಕಾರ, ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರನೇ ನಾಡಗೀತೆ ಹಾಡಬೇಕು ಎಂದು ವಿವಾದಿತ ಆದೇಶವನ್ನು ಹೊರಡಿಸಿದೆ. ಇದಕ್ಕೂ ಮುನ್ನ ಎಲ್ಲಾ ಶಾಲೆಗಳಲ್ಲಿ ದಿನದ ಚಟುವಟಿಕೆ ಆರಂಭಕ್ಕೂ ಮುನ್ನ ನಾಡಗೀತೆ ಹಾಡಬೇಕಿತ್ತು.

ಕೆಲ ಸರ್ಕಾರಿ ಇಲಾಖೆ, ಕಚೇರಿ, ಸರ್ಕಾರದ ಅಧಿಕೃತ ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಷ್ಟ್ರಗೀತೆಯೊಂದಿಗೆ ನಾಡಗೀತೆ ಕೂಡ ಹಾಡಬೇಕು ಎನ್ನುವ ಆದೇಶ ನೀಡಲಾಗಿತ್ತು. ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

 

Related