ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ನಿಂದ ಬೀಗ್ ರಿಲೀಸ್ ಸಿಕ್ಕಿದೆ.
ಹೌದು, ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸುಮಾರು 884 ಕೋಟಿ ಅಕ್ರಮ ವ್ಯಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ಧನ್ ರೆಡ್ಡಿ ಅವರಿಗೆ ಸುಮಾರು ಏಳು ವರ್ಷ ಜೈಲು ಸೆರೆವಾಸ ವಿಧಿಸಲಾಗಿತ್ತು. ಆದರೆ ಈಗ ಜನಾರ್ಧನ ರೆಡ್ಡಿ ಅವರಿಗೆ ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ. ಇದರಿಂದ ಗಣಿ ಧಣಿ ಜನಾರ್ದನ್ ರೆಡ್ಡಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಷರತ್ತುಗಳೇನು..?
10 ಲಕ್ಷ ರೂ. ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿಗೆ ಅನುಮತಿ ಇಲ್ಲ. ಪಾಸ್ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್
