ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್!

ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಅವರ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ಮತದಾರರನ್ನು ತಮ್ಮತ್ತ ಸೆಳೆದಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಇದನ್ನು ಉಲ್ಲಂಘಿಸಿ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳನ್ನು ಗೆದ್ದುಕೊಳ್ಳಲು ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳು ಕೂಡ ಒಂದು. ಚುನಾವಣಾ ಪ್ರಚಾರದ ವೇಳೆ ಐದು ಘೋಷಣೆಗಳ ಕಾರ್ಡ್​ಗಳನ್ನು ಮನೆಮನೆಗಳಿಗೆ ಹಂಚಲಾಗಿತ್ತು. ಈ ಕಾರ್ಡ್​​ಗಳಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸಹಿ ಹಾಕಿದ್ದರು.

Related