ಜೀವಾವಧಿ ಶಿಕ್ಷೆ ರದ್ದು ಮಾಡಿದ ಹೈಕೋರ್ಟ್!

ಜೀವಾವಧಿ ಶಿಕ್ಷೆ ರದ್ದು ಮಾಡಿದ ಹೈಕೋರ್ಟ್!

ಕಲಬುರಗಿ : ಕೊಲೆ ಆರೋಪದಲ್ಲಿ ವ್ಯಕ್ತಿಯೊಬ್ಬರಿಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸೆಷನ್ಸ್ ನ್ಯಾಯಾಲಯ ನೀಡಿದ ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿತ್ತು.

ಹೈಕೋರ್ಟ್ ಕಲಬುರಗಿ ಪೀಠದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಪಿ. ಕೃಷ್ಣಭಟ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪನ್ನು ನೀಡಿದೆ. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಹಿನ್ನಲೆಯಲ್ಲಿ ಶಿಕ್ಷೆ ರದ್ದಾಗಿದೆ.

2012ರ ಮೇ 18ರಂದು ರಾಚಪ್ಪ ಎಂಬುವವರ ಕೊಲೆ ನಡೆದಿತ್ತು. ವಿಜಯಪುರ ಜಿಲ್ಲೆಯ ದೇವರ ಗೆಣ್ಣೂರು ಗ್ರಾಮದ ಅಶೋಕ್ ಆರೋಪಿ ಎಂದು ಬಂಧಿಸಲಾಗಿತ್ತು. 2014ರ ಜೂನ್ 16ರಂದು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ರಾಚಪ್ಪ ಹತ್ಯೆಯಾಗಿದ್ದಾರೆ ಎಂಬುದನ್ನು ವೈದ್ಯಕೀಯ ದಾಖಲೆ ಹೇಳುತ್ತಿವೆ. ಆದರೆ, ಪ್ರತ್ಯಕ್ಷ ಸಾಕ್ಷಿ ಇಲ್ಲ ಎಂದು ಹೇಳಿದೆ.
ನ್ಯಾಯಾಲಯ ರಾಚಪ್ಪ ಅವರ ಮಗಳನ್ನೂ ವಿಚಾರಣೆ ನಡೆಸಿಲ್ಲ. ಹಣದ ವ್ಯವಹಾರ ನಡೆದಿದೆ ಎಂಬುದೇ ರುಜುವಾತಾಗಿಲ್ಲ ಎಂದು ಹೇಳಿರುವ ಕೋರ್ಟ್ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

Related