ಗಾಯಕ ವಿಜಯ್ ಪ್ರಕಾಶ್ ಗೆ ಒಲಿದು ಬಂದಿದ ಗೌರವ ಡಾಕ್ಟರೇಟ್

ಗಾಯಕ ವಿಜಯ್ ಪ್ರಕಾಶ್ ಗೆ ಒಲಿದು ಬಂದಿದ ಗೌರವ ಡಾಕ್ಟರೇಟ್

ಬೆಂಗಳೂರು: ತಮ್ಮ ಮಧುರ ಕಂಠದಿಂದಲೇ ಎಲ್ಲರ ಮನ ಕದಿಯುವ ಕನ್ನಡದ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಗೌರವ ಡಾಕ್ಟರೇಟ್ ಒಲಿದು ಬಂದಿದೆ.

ಹೌದು, ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಟೊರೆಂಟೋದಲ್ಲಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯಿತು. ವಿಜಯ್ ಅವರ ಕಲಾ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಟೊರೆಂಟೋದಲ್ಲಿ ವಿಜಯ್ ಪ್ರಕಾಶ್ ಲೈವ್ ಕಾರ್ಯಕ್ರಮ ಆಯೋಜನೆಯಾಗಿತ್ತು. ಅದರಲ್ಲಿ ಭಾಗಿಯಾಗಿದ್ದ ವೇಳೆ ರಿಚ್ಮಂಡ್ ಗ್ಯಾಬ್ರಿಯಾಲ್ ಯೂನಿವರ್ಸಿಟಿ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದೆ. ಈ ಖುಷಿ ವಿಚಾರವನ್ನು ಅವರೇ ಖುದ್ದಾಗಿ ಹಂಚಿಕೊಂಡಿದ್ದಾರೆ.

ಕವಿತೆ ಕವಿತೆ ಹಾಡಿನ ಮೂಲಕ ಕನ್ನಡಿಗರ ಮನಗೆದ್ದಿದ್ದ ಗಾಯಕ ವಿಜಯ್ ಪ್ರಕಾಶ್ ಇಂದು ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ಅನೇಕ ಹಾಡು ಹಾಡಿ ಕನ್ನಡಕ್ಕೆ ಹೆಮ್ಮೆ ತಂದಿದ್ದಾರೆ. ದೇಶ-ವಿದೇಶಗಳಲ್ಲೂ ಕಾರ್ಯಕ್ರಮ ನೀಡುತ್ತಲೇ ಇರುತ್ತಾರೆ. ಇದು ಅವರ ಕಲಾಸೇವೆಯನ್ನು ಗುರುತಿಸಿ ನೀಡಲಾಗುತ್ತಿರುವ ಮೊದಲ ಗೌರವ ಡಾಕ್ಟರೇಟ್ ಎನ್ನುವುದು ವಿಶೇಷ.

 

Related