ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ 23 ವರ್ಷದ ನೇಹಾ ಎಂಬ ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೊಬ್ಬನು ಹುಬ್ಬಳ್ಳಿ ಕಾಲೇಜಿನಲ್ಲಿ ಹಾಡು ಹೋಗಲೇ ನಡು ರಸ್ತೆಯಲ್ಲಿ ಚಾಕುಯಿಂದ ಸುಮಾರು 10 ಬಾರಿ ಚುಚ್ಚಿ ಚುಚ್ಚಿ ಇರಿದು ಸಾಯಿಸಿರುವ ಘಟನೆ ಬೆಳಕಿಗೆ ಬಂದಿದ್ದು ಈ ಘಟನೆಯಿಂದ ಹಿಡಿ ಹುಬ್ಬಳ್ಳಿ ನಗರವೇ ಬೆಚ್ಚಿಬಿದ್ದಿದೆ.

ಹೌದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರೊಬ್ಬರ ಪುತ್ರಿಯನ್ನು ಚಾಕುವಿನಿಂದ ಹಿರಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದದ್ದು ಆರೋಪಿಯನ್ನು ಪೊಲೀಸರು ಬಂಧಿಸಿ ಕೊಲೆಗೀಡಾದ ಯುವತಿಯನ್ನು ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.  ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಹಾಕಿದ ಫಯಾಜ್

ಕೊಲೆಯಾದ ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್‌ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

 

Related