ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಗೃಹ ಸಚಿವ ಹೇಳಿದ್ದೇನು..?

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಗೃಹ ಸಚಿವ ಹೇಳಿದ್ದೇನು..?

ತುಮಕೂರು: ನಿನ್ನೆ ಗುರುವಾರ ಏಪ್ರಿಲ್ 18ರಂದು ಹುಬ್ಬಳ್ಳಿ ನಗರದಲ್ಲಿ ಬಿವಿವಿ ಇಂಜಿನಿಯರಿಂಗ್ ಕಾಲೇಜಿನ ಅವರಣದಲ್ಲಿ ನೇಹಾ ಎಂಬ ಯುವತಿಯನ್ನು ಫಯಾಜ್ ಎಂಬ ಯುವಕನು ಚಾಕುವಿನಿಂದ ಹಿರಿದು ಕೊಲೆ ಮಾಡಿರುವ ಘಟನೆಗೆ ಇಂದು ಗೃಹ ಸಚಿವ ಪರಮೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದು, ನೇಹಾ ಕೊಲೆ ಪ್ರಕರಣಕ್ಕೂ ಮತ್ತು ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೇಹಾ ಮತ್ತು ಆರೋಪಿ ಫಯಾಜ್ ಇಬ್ಬರು ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೂಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.

 

Related