ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಪರಮ್

ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಪರಮ್

ಬೆಂಗಳೂರು: ಬಿಜೆಪಿಯವರಿಗೆ ಸರಿಯಾಗಿ ಹಿಂದೂ ಶ್ಲೋಕವನ್ನು ಹೇಳಲು ಬರುವುದಿಲ್ಲ ಹಾಗಾಗಿ ಅವರು ಸುಮ್ಸುಮ್ನೆ ಇಲ್ಲದ ಸಲದ ಆರೋಪಗಳನ್ನು ಕಾಂಗ್ರೆಸ್ ನಾಯಕರ ಮೇಲೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಬಿಜೆಪಿಯವರ ವಿರುದ್ಧ ಗುಡುಗಿದರು.

ಹಿಂದೂ ಧರ್ಮದ ಕುರಿತು ನೀಡಿದ ಹೇಳಿಕೆಗೆ ಗೃಹಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ಬಗ್ಗೆ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮವನ್ನು ಬೇರೆ ರೀತಿ ಅರ್ಥೈಸುವ ಕೆಲಸ ನಾನು ಮಾಡಿಲ್ಲ. ನಾವೆಲ್ಲಾ ಹಿಂದೂಗಳು, ಬೆಳಗ್ಗೆ ಎದ್ದರೆ ಗಣಪತಿಗೆ ಪ್ರಾರ್ಥಿಸುತ್ತೇನೆ. ನಾನು ಬೆಳಗ್ಗೆ ಎದ್ದ ಕೂಡಲೇ ಲಕ್ಷ್ಮೀ ಶ್ಲೋಕ ಹೇಳುತ್ತೇನೆ. ರಾತ್ರಿ ಮಲಗುವ ಮುಂಚೆ ಹನುಮನ ಶ್ಲೋಕ ಹೇಳುತ್ತೇನೆ ಎಂದು ಹೇಳಿ ಎರಡು ಶ್ಲೋಕಗಳನ್ನು ಹೇಳಿದರು.

ಅಲ್ಲದೆ, ಬಿಜೆಪಿಯವರಿಗೆ ಈ ಶ್ಲೋಕ ಹೇಳಲು ಬರುವುದಿಲ್ಲ. ಶ್ಲೋಕ ಹೇಳುವಂತೆ ಬಿಜೆಪಿಯವರಿಗೆ ಸವಾಲು ಹಾಕಿದರು. ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂದು ನಾನು ಪ್ರಶ್ನೆ ಮಾಡಿಲ್ಲ. ನಾನು ಸರ್ವಪಲ್ಲಿ ರಾಧಾಕೃಷ್ಣನ್​ ವಿಚಾರದ ಬಗ್ಗೆ ಮಾತಾಡಿದ್ದು, ಜೈನ, ಬುದ್ಧ, ಮುಸ್ಲಿಂ ಧರ್ಮಕ್ಕೆ ಸ್ಥಾಪಕರು ಇದ್ದಾರೆ. ಆದರೆ ಹಿಂದೂ ಧರ್ಮಕ್ಕೆ ಸ್ಥಾಪಕರು ಇಲ್ಲ ಎಂದು ಹೇಳಿದ್ದರು.

ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದ್ದಾರೆ. ನಾನು ಹಿಂದೂ ಧರ್ಮದ ಬಗ್ಗೆ ಅವಹೇನಕಾರಿಯಾಗಿ ಮಾತಾಡಿಲ್ಲ. ಹಿಂದೂ ಧರ್ಮದ ಮೇಲೆ ನಮಗೆ ಗೌರವವಿದೆ, ಬಿಜೆಪಿಗೆ ಇದೆಯಾ? ಎಂದು ಪ್ರಶ್ನಿಸಿದರು

 

Related