ಯಾವುದೇ ಕಾರಣಕ್ಕೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್ ಈಶ್ವರ್

ಯಾವುದೇ ಕಾರಣಕ್ಕೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಸುಧಾಕರ್ ಎನಾದ್ರು ಒಂದೇ ಒಂದು ಮತದಿಂದ ಗೆದ್ದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಕಾಂಗ್ರೆಸ್ನ ಶಾಸಕ ಪ್ರದೀಪ್ ಈಶ್ವರ ಅವರು ಹೇಳಿದರು.

ಆದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಸುಧಾಕರ್ ಅವರು ಬಹುಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಇದರಿಂದ ಪ್ರದೀಪ್ ಈಶ್ವರವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.

ಆದರೆ ನಾನು ಯಾವುದೇ ಕಾರಣಕ್ಕೂ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಲ್ಲ ಎಂದು ಶಾಸಕ ಪ್ರದೀಪ್ ಈಶ್ವರ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಎಂದು ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್; ಚಿತ್ರದುರ್ಗದಲ್ಲಿ ಪೊಲೀಸರ ಸ್ಥಳ ಮಹಜರ್

ಡಾ.ಕೆ.ಸುಧಾಕರ್ ಅವರಿಗೆ ಜನಾಭಿಪ್ರಾಯ ಸಿಕ್ಕಿದೆ. ಸಂಸದರಾಗಿರುವುದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಸುಧಾಕರ್ ಅವರು ಒಳ್ಳೆಯ ಕೆಲಸ ಮಾಡಿಕೊಂಡು ಹೋಗಲಿ. ರಾಜಕೀಯದಲ್ಲಿ ನಾವೆಲ್ಲ ಒಂದೇ ಎಂದು ಹೇಳುವ ಮೂಲಕ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿದ್ದಾರೆ.

ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ? ಸುಧಾಕರ್ ದೆಹಲಿಯಲ್ಲಿ ಇರ್ತಾರೆ ನಾನು ಬೆಂಗಳೂರಿನಲ್ಲಿ ಇರ್ತೀನಿ, ನಾವೆಲ್ಲ ಒಂದೇ. ನೀವ್ಯಾಕೆ ಗಲಾಟೆ ಮಾಡಿಕೊಂಡು ಸಮಸ್ಯೆ ಮಾಡಿಕೊಳ್ಳುತ್ತೀರಾ? ಎಂದು ಹೇಳಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರದಲ್ಲಿ ಇಂದು ಮತ್ತೆ ನಮಸ್ತೆ ಚಿಕ್ಕಬಳ್ಳಾಪುರ ಶುರು ಮಾಡಿದ್ದಾರೆ.

Related