ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಕಿಂಚಿತ್ತು ರಾಜಿ ಮಾಡಿಕೊಳ್ಳದೆ ಕೆಲಸ ಮಾಡುತ್ತೇನೆ: ಸಾಮ್ಯ ರೆಡ್ಡಿ

ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಕಿಂಚಿತ್ತು ರಾಜಿ ಮಾಡಿಕೊಳ್ಳದೆ ಕೆಲಸ ಮಾಡುತ್ತೇನೆ: ಸಾಮ್ಯ ರೆಡ್ಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣಾ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಿನ್ನೆ ಮಂಗಳವಾರ ರಾಷ್ಟ್ರ ನಾಯಕರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು.

ಸಾಮ್ಯ ರೆಡ್ಡಿ ಪರವಾಗಿಲ್ಲ ಕಾಂಗ್ರೆಸಿನ ರಾಷ್ಟ್ರ ನಾಯಕಿ ಪ್ರಿಯಾಂಕ ಗಾಂಧಿಯವರು ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಸೌಮ್ಯ ರೆಡ್ಡಿ ಅವರ ಪರ ಮತ ಪ್ರಚಾರ ಮಾಡಿದರು.

ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರವಾಗಿ ರಾಷ್ಟ್ರ ನಾಯಕ ಅಮಿತ್ ಶಾ ಅವರು ಬೊಮ್ಮನಹಳ್ಳಿ ಸರ್ಕಲ್ ನಿಂದ ಸುಮಾರು ಎರಡು ಮೂರು ಕಿಲೋಮೀಟರ್, ರ್ಯಾಲಿ ಮಾಡುವ ಮೂಲಕ ತೇಜಸ್ವಿ ಸೂರ್ಯ ಅವರ ಪರವಾಗಿ ಮತ ಪ್ರಚಾರ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರ ನಾಯಕರು ಮತ್ತು ರಾಜನಾಯಕರಗೆ ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಪರವಾಗಿ ರಾಷ್ಟ್ರ ನಾಯಕ ಸೇರಿದಂತೆ ರಾಜ ನಾಯಕರು ಮತ ಪ್ರಚಾರದಲ್ಲಿ ತೊಡಗಿದ್ದರಿಂದ ನನಗೆ ಬಹಳ ಸಂತೋಷವಾಯಿತು. ನನ್ನ ಪರವಾಗಿ ಇಷ್ಟೊಂದು ಜನ ಕಾಂಗ್ರೆಸ್ ಪರ್ವ ಇರುವುದನ್ನು ಕಂಡು ನನ್ನ ಮನ ತುಂಬಿ ಬಂತು.

ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಕಿಂಚಿತ್ತು ರಾಜಿ ಮಾಡಿಕೊಳ್ಳದೆ ಕೆಲಸ ಮಾಡುತ್ತೇನೆಂದು ನನ್ನ ಕ್ಷೇತ್ರದ ಮತದಾರ ಬಂಧುಗಳಲ್ಲಿ ತಿಳಿಸುತ್ತೇನೆ ಎಂದು ಹಂಚಿಕೊಂಡಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಭರ್ಜರಿ ರೋಡ್ ಶೋನಲ್ಲಿ ಪಾಲ್ಗೊಂಡೆ. ಕ್ಷೇತ್ರದ ಏಳ್ಗೆಗೆ ನನ್ನ ಬದ್ಧತೆಯಲ್ಲಿ ಕಿಂಚಿತ್ತು ರಾಜಿ ಮಾಡಿಕೊಳ್ಳದೆ ಕೆಲಸ ಮಾಡುತ್ತೇನೆಂಬ ಭರವಸೆಯನ್ನು ನೀಡಿದೆ.

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರಿಂದ ನನ್ನ ಉತ್ಸಾಹ ಇಮ್ಮಡಿಯಾಯಿತು. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಎಂ. ಕೃಷ್ಣಪ್ಪ, ಪ್ರಿಯಾಕೃಷ್ಣ ಅವರ ಪಾಲ್ಗೊಳ್ಳುವಿಕೆಯಿಂದ ರೋಡ್ ಶೋ ಅದ್ಭುತವಾಗಿ ಮೂಡಿಬಂತು.

ಅಪಾರ ಸಂಖ್ಯೆಯಲ್ಲಿ ಹರಿದುಬಂದ ಜನಸಾಗರವನ್ನು ಕಂಡು ಮನಃದುಂಬಿ ಬಂತು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿಸುವ ನಮ್ಮ ಹೋರಾಟಕ್ಕೆ ಎಲ್ಲರೂ ಜೊತೆಗೂಡುತ್ತಿದ್ದಾರೆ. ಭಾರತಕ್ಕೆ ಗೆಲುವಾಗಲಿದೆ. ಎಂದು ಬರೆದು ಕೊಂಡಿದ್ದಾರೆ.

Related